ಬೆಳಗಾವಿ : ಜಿಲ್ಲೆಯಲ್ಲಿ ಸಚಿವ ಭೈರತಿ ಸುರೇಶ್ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು. ತಾಕತ್ತಿದ್ದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ ಎಂದು ಸವಾಲು ಹಾಕಿದ್ದಾರೆ.
ಬೆಳಗಾವಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು ಭೈರತಿ ಸುರೇಶ ಮುಡಾದ ಸಾವಿರಾರು ಫೈಲ್ಸ್ ತಂದು ಸುಟ್ಟು ಹಾಕಿದ್ದಾರೆ.ಅದರ ಬಗ್ಗೆ ನಾನು ಧ್ವನಿ ಎತ್ತಿದೆ ಧ್ವನಿ ಎತ್ತಿದ ತಕ್ಷಣ ನನ್ನ ಬಗ್ಗೆ ಬೇರೆ ಬೇರೆ ಆರೋಪ ಮಾಡುತ್ತಿದ್ದಾರೆ.ನನ್ನ ವಿರುದ್ಧ ಹಲವಾರು ಸರ್ಕಾರಗಳು ಬಹಳ ತನಿಖೆ ಮಾಡಿದರು. ಆದರೆ ಶೋಭಾ ಕರಂದ್ಲಾಜೆ ಯಾವುದೇ ಭ್ರಷ್ಟಾಚಾರ ಮಾಡಿಲ್ಲ, ಮಾಡೋದು ಇಲ್ಲ ಎಂದು ಹೇಳಿದರು.
ನನ್ನ ವಿರುದ್ಧ ದಾಖಲೆ ಬಹಿರಂಗಕ್ಕೆ ಪೊನ್ನಣ್ಣನನ್ನು ನೇಮಕ ಮಾಡಿದ್ದಾರೆ. ಪೊನ್ನಣ್ಣನಿಗು ವಿದ್ಯುತ್ ಇಲಾಖೆ ಏನ್ ಸಂಬಂಧ.ಅಂದರೇ ಏನ್ ಮಾಡಲು ಹೊರಟ್ಟಿದ್ದೀರಿ ನೀವು ಫೇಕ್ ಫೈಲ್ ಕ್ರಿಯೆಟ್ ಮಾಡಲು ಪೊನ್ನಣ್ಣನಿಗೆ ಜವಾಬ್ದಾರಿ ಕೊಟ್ಟಿದ್ದೀರಿ ಯಾಕೆ. ನಿಮಗೆ ಈಗ ಸಂಕಷ್ಟ ಶುರುರುವಾಗಿದೆ, ಮೈಸೂರು ನಿಂದ ಫೈಲ್ ತಂದಿದ್ದು ಸತ್ಯ, ಸುಟ್ಟು ಹಾಕಿದ್ದು ಸತ್ಯ ಮುಡಾ ಬಗ್ಗೆ ತನಿಖೆ ಆರಂಭವಾಗಿದೆ ತನಿಖೆಗೆ ಕೇಂದ್ರ ತನಿಖಾ ಸಂಸ್ಥೆಗಳು ಎಂಟ್ರಿ ಆಗಿವೆ ಈ ಭಯದಿಂದ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.