Wednesday, January 22, 2025

ವಕ್ಫ್ ಕುರಿತು ರಾಜ್ಯಾದ್ಯಂತ ಪ್ರವಾಸ ಮಾಡಿ ಜಾಗೃತಿ ಮೂಡಿಸಲು ಮುಂದಾದ ಯತ್ನಾಳ

ವಿಜಯಪುರ :  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರೈತರಿಗೆ ವಕ್ಫ್​ನಿಂದ ನೀಡಿರುವ ನೋಟಿಸ್​ ಕುರಿತು ವಾಗ್ದಾಳಿ ನಡೆಸಿದ್ದು. ರಾಜ್ಯದಾದ್ಯಂತ ಇದರ ಕುರಿತು ಜನರಿಗೆ ಜಾಗೃತಿ ಮೂಡಿಸಲಾಗುವುದು, ಯಾವ ರೈತರಿಗೆ ಹೀಗಾಗಲೆ ನೋಟಿಸ್​ ನೀಡಿದ್ದಾರೊ ಅವರು ನಮ್ಮ ಕಛೇರಿಯನ್ನು ಸಂಪರ್ಕಿಸಿ ಎಂದು ಹೇಳಿದರು.

ವಕ್ಫ್ ಮಂಡಳಿಯಿಂದ ರೈತರಿಗೆ ನೀಡಿರುವ ನೋಟಿಸ್​ಗೆ ವಾಗ್ದಾಳಿ ನಡೆಸಿದ ಶಾಸಕ ಯತ್ನಾಳ
ವಕ್ಪ್ ಮಂಡಳಿಯವರು ದೇವಸ್ಥಾನಕ್ಕೆ ಕೂಡಾ ನೋಟಿಸ್ ನೀಡುತ್ತಿದ್ದಾರೆ. ದೇಶದಲ್ಲಿ ವಕ್ಪ್ ಕಾನೂನು ವಿರುದ್ಧ ಹೋರಾಟ ಮಾಡಲಾಗುವುದು ಎಂದು ಹೇಳಿದರು.

ರೈತರಿಗೆ ವಕ್ಪ್ ನೋಟಿಸ್ ನೀಡಿದ ವಿಚಾರವಾಗಿ ಮಾತನಾಡಿದ ಯತ್ನಾಳ ರೈತರು ಆತಂಕ ಪಡಬಾರದು, ನಾವುಗಳು ಕಾನೂನು ಹೋರಾಟ ಮಾಡೋಣ.ಯಾರಿಗಾದರೂ ನೋಟೀಸ್ ಬಂದರೆ ನಮ್ಮ ಕಚೇರಿ ಸಂಪರ್ಕ ಮಾಡಿ. ವಿಜಯಪುರ ಜಿಲ್ಲೆ ಮಾತ್ರವಲ್ಲ ಬೇರೆ ಜಿಲ್ಲೆಯ ರೈತರು ಸಹ ನಮ್ಮ ಕಚೇರಿ ಸಂಪರ್ಕ ಮಾಡಿ.
ನೋಟಿಸ್ ನೀಡಿದ್ದರ ಬಗ್ಗೆ ಕಾನೂನು ಹೋರಾಟಕ್ಕೆ ವಕೀಲರ ತಂಡ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯಾದ್ಯಂತ ಪ್ರವಾಸ ಮಾಡಿ ರೈತರಿಗೆ ಜಾಗೃತಿ ಮೂಡಿಸುತ್ತೇವೆ. ಸಚಿವ ಜಮೀರ್ ಪ್ರವಾಸ ಮಾಡಿದ ಜಿಲ್ಲೆಗಳಲ್ಲಿ ಕಾರ್ಯಕ್ರಮ ಮಾಡುತ್ತೇವೆ. ವಕ್ಪ್ ಕಾನೂನು ವಿರುದ್ಧ ಹೋರಾಟ ಮಾಡಲಾಗುವುದು. ಜಿಲ್ಲೆಯಲ್ಲಿ ವಕ್ಪ್ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಿರಾ. ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಯಾವುದೇ ಜಮೀನು ವಕ್ಪ್ ಆಸ್ತಿ ಆಗಿಲ್ಲ ಎನ್ನುತ್ತಾರೆ. ವಕ್ಪ ಕಾನೂನು ನೆಹರು ಮಾಡಿರುವ ದೊಡ್ಡ ತಪ್ಪು. ಕರ್ನಾಟಕದಲ್ಲಿ ಮತ್ತೊಂದು ಪಾಕಿಸ್ತಾನ ನಿರ್ಮಾಣ ಮಾಡೋದಕ್ಕೆ ವಕ್ಪ್ ಕೆಲಸ ಮಾಡ್ತಿದೆ ಅನಿಸುತ್ತಿದೆ. ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

RELATED ARTICLES

Related Articles

TRENDING ARTICLES