Monday, December 23, 2024

ಇಂದೇ ಅಮೇರಿಕಾದಲ್ಲಿ ದೀಪಾವಳಿ ಆಚರಿಸಲಿದ್ದಾರೆ ಅಧ್ಯಕ್ಷ ಜೋಬೈಡನ್​

ವಾಷಿಂಗ್​ಟನ್​​ : ಹಿಂದೂಗಳೂ ಅತ್ಯಂತ ಸಂಭ್ರಮದಿಂದ ಆಚರಿಸುವ ಹಬ್ಬವೆಂದರೆ ಅದು ಬೆಳಕಿನ ಹಬ್ಬ ದೀಪಾವಳಿ. ಇದು ಕೇವಲ ಭಾರತದಲ್ಲಿ ಮಾತ್ರವಲ್ಲದೆ ಅಮೇರಿಕಾದಲ್ಲಿರುವ ಅನಿವಾಸಿ ಭಾರತೀಯರು ಕೂಡ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ.

ಇಂದು ಅಮೇರಿಕಾದ ಶ್ವೇತ ಭವನದಲ್ಲಿ ಅನಿವಾಸಿ ಭಾರತೀಯರ ಜೊತೆ ಅಮೇರಿಕಾದ ಅಧ್ಯಕ್ಷ ಜೋ ಬೈಡನ್​​ ದೀಪಾವಳಿ ಆಚರಿಸಲಿದ್ದು. ಅಧ್ಯಕ್ಷರ ಭಾಷಣದ ವೇಳೆ ನಾಸಾ ಗಗನಯಾತ್ರಿ ಮತ್ತು ನಿವೃತ್ತ ನೌಕಾಪಡೆಯ ಕ್ಯಾಪ್ಟನ್ ಸುನಿತಾ  ವಿಲಿಯಮ್ಸ್ ಅವರ ವೀಡಿಯೊ ಸಂದೇಶವಿರಲಿದೆ. ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ವೀಡಿಯೊ ಶುಭಾಶಯವನ್ನು ರೆಕಾರ್ಡ್ ಮಾಡಿ ಕಳುಹಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಹಿಂದಿನ ವರ್ಷಗಳ ಸಂಪ್ರದಾಯದಂತೆ ಅಧ್ಯಕ್ಷರು ಭಾಷಣಕ್ಕೂ ಮುನ್ನಾ ಬ್ಲೂ ರೂಮ್‌ನಲ್ಲಿ ದೀಪವನ್ನು ಬೆಳಗಿಸುತ್ತಾರೆ ಎಂದು ಶ್ವೇತಭವನ ತಿಳಿಸಿದೆ. ಬಳಿಕ ಅವರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅವರಿಗಾಗಿಯೇ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

RELATED ARTICLES

Related Articles

TRENDING ARTICLES