Thursday, January 23, 2025

ಅನ್ನದಾತರಿಗೆ ದೀಪಾವಳಿ ಗಿಫ್ಟ್​ ನೀಡಿದ ಕೇಂದ್ರ ಸರ್ಕಾರ: ಭತ್ತದ ಬೆಂಬಲ ಬೆಲೆ ಹೆಚ್ಚಳ

ದೆಹಲಿ :  ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ಬೀರಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರ ಭತ್ತದ ಬೆಂಬಲ ಬೆಳೆ ಹೆಚ್ಚಳ ಮಾಡಿದ ಕುರಿತು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ ಭತ್ತ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಮಾಹಿತಿ ನೀಡಿದ ಪ್ರಹ್ಲಾದ್ ಜೋಶಿ .2013-14 ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ರೂ.1,310 ಇದ್ದು, ಈಗ ಅದನ್ನು 2,300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು. ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಹಾಕಿಕೊಂಡಿದೆ ಎಂದರು.

ಭತ್ತದ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 ಲಕ್ಷ ಮೆಟ್ರಿಕ್​ ಟನ್​ ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ. ಅಕ್ಟೋಬರ್ 1ರಿಂದ 2700 ಮಂಡಿಗಳಲ್ಲಿ ಭತ್ತ ಸಂಗ್ರಹಣೆ ಪ್ರಾರಂಭಿಸಿದ್ದು, ಇಂದಿಗೆ ಒಟ್ಟು 50 ಲಕ್ಷ ಮೆಟ್ರಿಕ್​ ಟನ್​ ಭತ್ತವನ್ನು ಸಂಗ್ರಹಿಸಲಾಗಿದೆ ಎಂದರು.

ನಾಮನಿರ್ದೇಶನದ ಆಧಾರದ ಮೇಲೆ CWC/SWC ಗೋದಾಮುಗಳನ್ನು ಬಾಡಿಗೆಗೆ ತೆಗೆದುಕೊಂಡು ಶೇಖರಣೆಗೆ ವ್ಯವಸ್ಥೆ ಮಾಡಲಾಗಿದೆ. ಗೋಧಿ ದಾಸ್ತಾನು ತ್ವರಿತ ಸ್ಥಳಾಂತರ ಜೊತೆಗೆ PEG ಯೋಜನೆಯಡಿ 31 ಲಕ್ಷ ಮೆಟ್ರಿಕ್​ ಟನ್​  ಶೇಖರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಅಕ್ಕಿ ಗಿರಣಿದಾರರಿಗೆ ದೂರು ಪರಿಹಾರಕ್ಕಾಗಿ ಆನ್‌ಲೈನ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

RELATED ARTICLES

Related Articles

TRENDING ARTICLES