Monday, December 23, 2024

ಬೀಕರ ಬಸ್​ ಅಪಘಾತ :10 ಮಂದಿ ಸಾವು

ಜೈಪುರ್​ : ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಬೀಕರ ಬಸ್​ ಅಪಘಾತವೊಂದು ಸಂಭವಿಸಿದ್ದು.ಸುಮಾರು 10 ಜನ ಮೃತಪಟ್ಟಿದ್ದು,36 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಸಲಾಸರ್​ನಿಂದ ಲಕ್ಷ್ಮಣಗಡಕ್ಕೆ ಬರುತ್ತಿದ್ದ ಖಾಸಗಿ ಬಸ್​ವೊಂದು ನಿಯಂತ್ರಣ ತಪ್ಪಿಅಪಘಾತವಾಗಿದೆ ಎಂದು ಮಾಹಿತಿ ದೊರೆತಿದ್ದು. ತಿರುವು ತೆಗೆದುಕೊಳ್ಳುವಾಗ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೋಲಿಸ್​​ ವರಿಷ್ಠಾಧಿಕಾರಿ ಭುವನ್ ಭೂಷಣ ಯಾದವ್​ ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಲಕ್ಷ್ಮಣಗಡ ಮತ್ತು ಸಿಕರ್​ನ ಆಸ್ಪತ್ರೆಗೆ ದಾಖಲು ಮಾಡಿದ್ದು. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೋಲಿಸ್ ವರಿಷ್ಠಾಧಿಕಾರಿ ಯಾದವ್​ ಮಾಹಿತಿ ನೀಡಿದ್ದಾರೆ.

 

RELATED ARTICLES

Related Articles

TRENDING ARTICLES