Monday, December 23, 2024

69 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ : ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಗಿಟ್ಟಿಸಿಕೊಂಡ ವೀರಪ್ಪ ಮೊಯ್ಲಿ

ಬೆಂಗಳೂರು : ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಸಂಧರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದ್ದು. ಒಟ್ಟು 69 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಬಾರಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ನೀಡಿರುವುದು ವಿಶೇಷವಾಗಿದೆ.

ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1575 ಅರ್ಜಿಗಳು ಬಂದಿದ್ದವು, ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರನ್ನು ಆಯ್ಕೆ ಮಾಡಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಮಾಹಿತಿ ನೀಡಿದರು.

ಮುಂದುವರಿದು ಮಾತನಾಡಿದ ಸಚಿವರು ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಳ್ಳಲಾಗಿದೆ.ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಬಯಲಾಟ ಕ್ಷೇತ್ರದಲ್ಲಿ 92 ವರ್ಷದ ಶ್ರೀ ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ. ಇವರ ಹೆಸರನ್ನು ಸಹ ಪರಿಗಣಿಸಲಾಗಿದೆ.ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ಶ್ರೀ ನರಸಿಂಹಲು, ಬೀದರ್ ಜಿಲ್ಲೆ ಇವರನ್ನು ಸಹ ಪರಿಗಣಿಸಲಾಗಿದೆ. ಇದರಲ್ಲಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ 

ಜಾನಪದ ಕ್ಷೇತ್ರ

  • ಇಮಾಮಸಾಬ ಎಂ. ವಲ್ಲೆಪನವರ
  • ಅಶ್ವ ರಾಮಣ್ಣ
  • ಕುಮಾರಯ್ಯ
  • ವೀರಭದ್ರಯ್ಯ
  • ನರಸಿಂಹಲು (ಅಂಧ ಕಲಾವಿದ)
  • ಬಸವರಾಜ ಸಂಗಪ್ಪ ಹಾರಿವಾಳ
  • ಎಸ್.ಜಿ. ಲಕ್ಷ್ಮೀದೇವಮ್ಮ
  • ಪಿಚ್ಚಳ್ಳಿ ಶ್ರೀನಿವಾಸ
  • ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ

  • ಹೇಮಾ ಚೌಧರಿ
  • ಎಂಎಸ್ ನರಸಿಂಹಮೂರ್ತಿ

ಸಂಗೀತ ಕ್ಷೇತ್ರ

  • ಪಿ ರಾಜಗೋಪಾಲ
  • ಎಎನ್​ ಸದಾಶಿವಪ್ಪ

ನೃತ್ಯ: ವಿದುಷಿ ಲಲಿತಾ ರಾವ್,

ಆಡಳಿ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ,  ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ,  ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ ಪರಿಸರ: ಆಲ್ಮಿತ್ರಾ ಪಟೇಲ್

ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ

ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶಿ

ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್

ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ

RELATED ARTICLES

Related Articles

TRENDING ARTICLES