Sunday, December 15, 2024

ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕಿಯಂತೆ ಯೋಗಿಯನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಸಂದೇಶ

ಮುಬೈ ​: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರಂತೆಯೇ ನಿಮ್ಮನ್ನು ಕೊಲ್ಲಲಾಗುವುದು ಎಂದು ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶವೊಂದು ಬಂದಿದೆ ಎನ್ನಲಾಗಿದೆ.

ಮುಂಬೈ ಪೊಲೀಸ್‌ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎನ್ನಲಾಗಿದೆ. ಇತ್ತ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಮುಂಬೈ ಪೊಲೀಸರು ಸಂದೇಶ ಕಳುಹಿಸಿದ ವ್ಯಕ್ತಿಯ ಜಾಡು ಪತ್ತೆಹಚ್ಚುವ ಕಾರ್ಯ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೋಲಿಸರು ಮತ್ತು ATS ಟೀಮ್​ ಜಂಟಿ ಕಾರ್ಯಚರಣೆ ನಡೆಸಿದ್ದು. ಥಾಣೆಯಲ್ಲಿ ವಾಸವಾಗಿದ್ದ ಫಾತೀಮ ಎಂಬ ಮಹಿಳೆಯನ್ನು ಬಂಧಿಸಿದ್ದು. ಮಾನಸಿಕ ಅಸ್ವಸ್ಥೆಯಾಗಿರುವ ಈಕೆ ಬೆದರಿಕೆ ಸಂದೇಶ ಕಳುಹಿಸಿರುವಾಗಿ ಒಪ್ಪಿಕೊಂಡಿದ್ದಾಳೆ. ಈಕೆಯನ್ನು ಹೆಚ್ಚಿನ ತನಿಖೆಗಾಗಿ ಪೋಲಿಸರು ವಷಕ್ಕೆ ಪಟೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ, ಕೊಲೆ ಬೆದರಿಕೆಗಳು ಹೆಚ್ಚಾಗಿದ್ದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ, ದಿನ ಬೆಳಗಾದರೆ, ವಿಮಾನ, ಆಸ್ಪತ್ರೆ, ಶಾಲಾ ಕಾಲೇಜು ಸೇರಿದಂತೆ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುತ್ತವೆ, ಇದರ ಬೆನ್ನಲೇ ಇದೀಗ ಹಿರಿಯ ವ್ಯಕ್ತಿಗಳನ್ನು ಗುರಿಯಾಗಿಸಿ ಬೆದರಿಕೆ ಸಂದೇಶಗಳು ಬರತೊಡಗಿದೆ.

RELATED ARTICLES

Related Articles

TRENDING ARTICLES