Monday, December 23, 2024

ಮುಂದಿನ ಮೂರು ದಿನ ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧರಣ ಮಳೆ ಜೊತೆ ಒಣ ಹವೆ ಸಾಧ್ಯತೆ ಇರಲಿದೆಯೆಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು. ಮುಂದಿನ 48 ಗಂಟೆ ಸಾಮಾನ್ಯವಾಗಿ ಮೋಡ ಕವಿದ ವಾತವರಣವಿರಲ್ಲಿದ್ದು.., ಹಗುರ ಮಳೆಯಾಗುವ ಸಾಧ್ಯತೆ ಇರಲಿದೆ. ಈ ವೇಳೆ ಗರಿಷ್ಠ ತಾಪಮಾನ  31°C ಮತ್ತು ಕನಿಷ್ಠ ತಾಪಮಾನವು  21°C ಇರುವ ಸಾಧ್ಯತೆ ಇರಲಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಂಡ್ಯ, ಮೈಸೂರು, ಕೊಡಗು,
ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು. ನಾಳೆ (ಸೋಮವಾರ) ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇರಲಿದೆ. ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು. ಬುಧವಾರದಿಂದ ರಾಜ್ಯದ ಜಿಲ್ಲೆಗಳ ಮೇಲೆ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ದೊರೆತಿದೆ.

RELATED ARTICLES

Related Articles

TRENDING ARTICLES