Thursday, November 7, 2024

IAS vs IPS ಅಧಿಕಾರಿಗಳ ಜಗಳ ಸುಖಾಂತ್ಯ : ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್​

ಬೆಂಗಳೂರು : ಕಳೆದ ವರ್ಷ ಕರ್ನಾಟಕದ ಇಬ್ಬರು ಮಹಿಳಾ ಲೋಕಾಸೇವ ಆಯೋಗದ ಅಧಿಕಾರಿಗಳು ಪರಸ್ಪರ ಕಿತ್ತಾಡಿಕೊಂಡ ಘಟನೆ ದೇಶದಾದ್ಯಂತ ಸುದ್ದಿಯಾಗಿತ್ತು. ಐಎಎಸ್​​​ ಅಧಿಕಾರಿ ರೋಹಿಣಿ ಸಿಂಧೂರಿ, ಐಪಿಎಸ್​​ ಅಧಿಕಾರಿ ರೂಪಾ ಮೌದ್ಗಿಲ್​​ ನನ್ನ ಮಾನನಷ್ಟ ಮಾಡಿದ್ದಾರೆ ಎಂದು ಪ್ರಕರಣ ದಾಖಲು ಮಾಡಿದ್ದರು.

ಈ ದೂರಿನಲ್ಲಿ ರೋಹಿಣಿ ಸಿಂದೂರಿ, ರೂಪಾ ಮೌದ್ಗಿಲ್ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾರ್ಚ್‌ 3ರಂದು ಖಾಸಗಿ ದೂರು ದಾಖಲಿಸಿದ್ದರು.

ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಅರ್ಜಿಯನ್ನು ವಜಾಗೊಳಿಸಿದ್ದು. ಎರಡು ಪಕ್ಷಗಾರರು ಪರಸ್ಪರ ಮಾತುಕತೆ ಮೂಲಕ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಂಡ ಹಿನ್ನೆಲೆ ಇಂದು ಸುಪ್ರೀಂಕೋರ್ಟ್​ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್​ ನೀಡಿದ್ದ ತೀರ್ಪನ್ನು ವಿರೋಧಿಸಿ ಡಿ.ರೂಪಾ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಇಂದು ನ್ಯಾ.ಅಭಯ ಎಸ್ ಓಕಾ‌ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ಈ ತೀರ್ಪನ್ನು ನೀಡಿದ್ದಾರೆ.

RELATED ARTICLES

Related Articles

TRENDING ARTICLES