Wednesday, January 22, 2025

ವೈದ್ಯರ ಎಡವಟ್ಟು: ​ಎಡಗಣ್ಣಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ಬಾಲಕನ ಬಲ ಕಣ್ಣಿಗೆ ಆಪರೇಷನ್!​

ಉತ್ತರಪ್ರದೇಶ : ಎಡಗಣ್ಣಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ಬಾಲಕನಿಗೆ, ವೈದ್ಯರು ಬಲ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿರುವ ಆಘಾತಕಾರಿ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಈ ಕುರಿತು ಬಾಲಕನ ಪೋಷಕರು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪೊಲೀಸ್ ದೂರು ನೀಡಿದ್ದಾರೆ.

ವೈದ್ಯರ ಹಾಗೂ ಆಸ್ಪತ್ರೆಯ ಪರವಾನಗಿಯನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಎಡಗಣ್ಣಿನ ಬದಲು ಬಲಗಣ್ಣಿಗೆ ಬ್ಯಾಂಡೇಜ್ ಹಾಕಿರುವುದನ್ನು ಕಂಡು ತಾಯಿ ಕಂಗಾಲಾಗಿದ್ದಾರೆ. ಬಳಿಕ ಸೂಕ್ಷ್ಮವಾಗಿ ಗಮನಿಸಿದಾಗ ವೈದ್ಯರು ತಪ್ಪಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂಬುದು ಖಚಿತವಾಗಿದೆ.

ಇದರಿಂದಾಗಿ ಆಕ್ರೋಶಗೊಂಡ ಬಾಲಕನ ಕುಟುಂಬಸ್ಥರು ವೈದ್ಯರ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ ಮತ್ತು ಆಸ್ಪತ್ರೆಯ ಪರವಾನಿಗೆಯನ್ನು ರದ್ದುಪಡಿಸಬೇಕೆಂದು ಕೇಳಿದ್ದಾರೆ.

RELATED ARTICLES

Related Articles

TRENDING ARTICLES