Wednesday, January 22, 2025

ಫಲಿತಾಂಶಕ್ಕು ಮುನ್ನವೇ ಸೋಲಿನ ಭೀತಿ ವ್ಯಕ್ತಪಡಿಸಿದ ಸಿ.ಪಿ ಯೋಗೇಶ್ವರ್​ ?

ರಾಮನಗರ: ಚನ್ನಪಟ್ಟಣ ಉಪಚುನಾವಣೆ ಹಿನ್ನಲೆ.ಚನ್ನಪಟ್ಟಣ ನಿವಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಸುದ್ದಿಗೋಷ್ಠಿ ಮಾಡಿ ಮಾತನಾಡಿದರು.  ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ.ನನ್ನ ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಸಚಿವರು ಕೆಲಸ ಮಾಡಿದ್ದಾರೆ. ಸಾಕಷ್ಟು ಶಾಸಕರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ.ಡಿ.ಕೆ.ಸುರೇಶ್ ವಿಶೇಷವಾಗಿ ಕೆಲಸ ಮಾಡಿದ್ದಾರೆ. ಇದು ನನ್ನ ರಾಜಕೀಯ ಜೀವನದ ದೊಡ್ಡ ಚುನಾವಣೆ ಎಂದು ಹೇಳಿದರು

ಈ ಚುನಾವಣೆ  ಇಷ್ಟೊಂದು ತೀವ್ರತೆ ಪಡೆಯುತ್ತೆ ಅಂದುಕೊಂಡಿರಲಿಲ್ಲ. ಇದು ಕುಮಾರಸ್ವಾಮಿರಿಂದ ತೆರವಾದ ಕ್ಷೇತ್ರ, ಕುಟುಂಬಕ್ಕೆ ಉಳಿಸಿಕೊಳ್ಳಲು ಮುಂದಾದ್ರು.ರಾಜಕೀಯ ದೈತ್ಯ ನಾಯಕ ದೇವೇಗೌಡರ ಹಠ, ಮೊಮ್ಮಗನ ಗೆಲ್ಲಿಸುವ ಶಪಥ ಮಾಡಿದ್ರು. ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರನನ್ನ ಗೆಲ್ಲಿಸಿಕೊಂಡು ಕ್ಷೇತ್ರ ಉಳಿಸಿಕೊಳ್ಳಲು ಹೋರಾಟ ಮಾಡಿದ್ರು. ಎರಡೂ ಕಡೆಯೂ ಸಮಬಲದ ಹೋರಾಟ ಇದೆ. ಆದರೂ ಕೆಲವು ಸ್ಟೇಟ್ ಮೆಂಟ್ ಹಾಗೂ ಮಾತುಗಳು ಜನರ ಭಾವನೆಗೆ ಘಾಸಿ ಮಾಡಿದೆ ಎಂದು ಹೇಳಿದರು.

ಜಮೀರ್​ ಕುರಿತು ಸಿಪಿವೈ ಹೇಳಿಕೆ 

ಕುಮಾರಸ್ವಾಮಿ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಜಮೀರ್​ ಹೇಳಿಕೆ ಕುರಿತು ಮಾತನಾಡಿದ ಸಿಪಿವೈ, ‘ಜಮೀರ್ ಸ್ಟೇಟ್ ಮೆಂಟ್ ಒಂದಷ್ಟು ಲಾಭ ಆದ್ರೆ ಒಂದಷ್ಟು ನಷ್ಟ ಆಗಿದೆ.ಮುಸ್ಲಿಂ ಮತಗಳ ಕ್ರೂಡೀಕರಣ ಒಂದುಕಡೆ ಆದ್ರೆ ಇನ್ನೊಂದು ಸಮುದಾಯಕ್ಕೆ ಹೊಡೆತ ಬಿದ್ದಿದೆ.ಅದರಿಂದ ಸ್ವಲ್ಪ ಆಘಾತ ಆಗಿದೆ.
ನಿರಾಶಾದಾಯಕ ವಿಷಯ ಏನಿಲ್ಲ, ಯಾರೇ ಗೆದ್ರೂ ಕೂದಲೆಳೆ ಅಂತರದಲ್ಲಿ ಗೆಲ್ತೀವಿ ಎಂದ ಸಿಪಿವೈ ಹೇಳಿದರು.

ಸೋಲಿನ ಭೀತಿ ವ್ಯಕ್ತಪಡಿಸಿದ ಸೈನಿಕ!

ಮುಂದುವರಿದು ಮಾತನಾಡಿದ ಸಿಪಿವೈ ನಾನು ಕಾನ್ಫಿಡೆನ್ಸ್ ಕಳೆದುಕೊಂಡಿಲ್ಲ. ದೈತ್ಯ ಶಕ್ತಿ, ಒಕ್ಕಲಿಗರ ಬೆಂಬಲ ಇರೋ ವಂಶದ ಕುಡಿ ನನ್ನ ವಿರುದ್ಧ ಸ್ಪರ್ಧೆ ಮಾಡಿದೆ. ಕಳೆದ ಚುನಾವಣೆ ಕಾಂಗ್ರೆಸ್ ಪಡೆದ ಮತ 15 ಸಾವಿರ.
ಈಗ ನಾವು ಒಂದು ಲಕ್ಷಕ್ಕಿಂತ ಅಧಿಕ ಮತ ಪಡೆದರೆ ಗೆಲುವು ಸಿಗುತ್ತೆ. ಈವರೆಗೂ ನನ್ನ ಎಲ್ಲಾ ಚುನಾವಣೆಯಲ್ಲೂ 80ರಿಂದ 90 ಸಾವಿರ ಮತಗಳ ಪಡೆಯುತ್ತಿದ್ದೆ.ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದೇನೆ.
ಬಿಜೆಪಿ-ಜೆಡಿಎಸ್ ಎರಡರ ಮೈತ್ರಿ ಇಲ್ಲಿ ವರ್ಕ್ ಆಗಬಹುದು. ಹಾಗಾಂತ ಹತಾಶೆ ಇಲ್ಲ, ಸಮಬಲದ ಹೋರಾಟ ಅಷ್ಟೇ ಎಂದು ಹೇಳಿದರು.

ನಾನು ಕಾಂಗ್ರೆಸ್ ಸೇರುವ ಅನಿವಾರ್ಯ ಸ್ಥಿತಿಯನ್ನ ಕುಮಾರಸ್ವಾಮಿ ನಿರ್ಮಾಣ ಮಾಡಿದ್ರು. ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುವ ಪರಿಸ್ಥಿತಿ ಬಂತು. ನಾನು ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್ ಗೆ ಅಸ್ತಿತ್ವ ಇರಲಿಲ್ಲ.ಈಗ ಕಡಿಮೆ ಸಮಯದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನನ್ನ ರಾಜಕೀಯ ಜೀವನ ಒಂಥರಾ ಐಪಿಎಲ್ ಮ್ಯಾಚ್ ರೀತಿ ಆಗಿದೆ. ಒಂದೊಂದು ಸೀಸನ್ ನಲ್ಲಿ ಒಂದೊಂದು ಟೀಮ್ ನಲ್ಲಿ ಆಟ ಆಡುವಂತಾಗಿದೆ.

ದೇವೇಗೌಡರು ಒಂದು ದೈತ್ಯ ಶಕ್ತಿ. ದೇವೇಗೌಡರಿಗೆ, ಕುಮಾರಸ್ವಾಮಿಗೆ ಬೈದರೆ ಸಹಿಸದ ಸಮುದಾಯ ಇದೆ.
ಜನ ದೇವೇಗೌಡರು, ಕುಮಾರಸ್ವಾಮಿರನ್ನ ಮಾತ್ರ ಸಮುದಾಯದ ನಾಯಕ ಅಂತ ಗುರುತಿಸ್ತಾರೆ.
ನಮ್ಮನ್ನ ಸಮುದಾಯದ ಲೀಡರ್ ಅಂತ ಯಾವಾಗ ಸ್ವೀಕಾರ ಮಾಡ್ತಾರೋ ಗೊತ್ತಿಲ್ಲ ಎಂದು  ಸಿಪಿವೈ ಹೇಳಿದರು.

RELATED ARTICLES

Related Articles

TRENDING ARTICLES