Wednesday, January 22, 2025

‘ನನ್ನ ಜೀವನ ಐಪಿಎಲ್​​ ರೀತಿಯಾಗಿದೆ’ ಎಂದು ಪಕ್ಷಾಂತರದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಿಪಿವೈ

ರಾಮನಗರ : ಉಪಚುನಾವಣೆ ಮುಗಿಸಿಕೊಂಡು ರಿಲ್ಯಾಕ್ಷ್​ ಮೂಡ್​ನಲ್ಲಿರುವ ಕಾಂಗ್ರೆಸ್​​ ನಾಯಕ ಸಿಪಿ.ಯೋಗೇಶ್ವರ್ ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿ ಚುನಾವಣ ಫಲಿತಾಂಶದ ಕುರಿತು ಮಾತನಾಡಿದರು.

ನಾನು ಕಾನ್ಫಿಡೆನ್ಸ್ ಕಳೆದುಕೊಂಡಿಲ್ಲ. ದೈತ್ಯ ಶಕ್ತಿ, ಒಕ್ಕಲಿಗರ ಬೆಂಬಲ ಇರೋ ವಂಶದ ಕುಡಿ ನನ್ನ ವಿರುದ್ಧ ಸ್ಪರ್ಧೆ ಮಾಡಿದೆ. ಕಳೆದ ಚುನಾವಣೆ ಕಾಂಗ್ರೆಸ್ ಪಡೆದ ಮತ 15 ಸಾವಿರ.ಈಗ ನಾವು ಒಂದು ಲಕ್ಷಕ್ಕಿಂತ ಅಧಿಕ ಮತ ಪಡೆದರೆ ಗೆಲುವು ಸಿಗುತ್ತೆ. ಈವರೆಗೂ ನನ್ನ ಎಲ್ಲಾ ಚುನಾವಣೆಯಲ್ಲೂ 80ರಿಂದ 90 ಸಾವಿರ ಮತಗಳ ಪಡೆಯುತ್ತಿದ್ದೆ. ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದೇನೆ. ಬಿಜೆಪಿ-ಜೆಡಿಎಸ್ ಎರಡರ ಮೈತ್ರಿ ಇಲ್ಲಿ ವರ್ಕ್ ಆಗಬಹುದು. ಹಾಗಾಂತ ಹತಾಶೆ ಇಲ್ಲ, ಸಮಬಲದ ಹೋರಾಟ ಅಷ್ಟೇ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಸಿಪಿವೈ  ನಾನು ಕಾಂಗ್ರೆಸ್ ಸೇರುವ ಅನಿವಾರ್ಯ ಸ್ಥಿತಿಯನ್ನ ಕುಮಾರಸ್ವಾಮಿ ನಿರ್ಮಾಣ ಮಾಡಿದ್ರು. ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುವ ಪರಿಸ್ಥಿತಿ ಬಂತು. ನಾನು ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್ ಗೆ ಅಸ್ತಿತ್ವ ಇರಲಿಲ್ಲ.ಈಗ ಕಡಿಮೆ ಸಮಯದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನನ್ನ ರಾಜಕೀಯ ಜೀವನ ಒಂಥರಾ ಐಪಿಎಲ್ ಮ್ಯಾಚ್ ರೀತಿ ಆಗಿದೆ. ಒಂದೊಂದು ಸೀಸನ್ ನಲ್ಲಿ ಒಂದೊಂದು ಟೀಮ್ ನಲ್ಲಿ ಆಟ ಆಡುವಂತಾಗಿದೆ.

ದೇವೇಗೌಡರು ಒಂದು ದೈತ್ಯ ಶಕ್ತಿ. ದೇವೇಗೌಡರಿಗೆ, ಕುಮಾರಸ್ವಾಮಿಗೆ ಬೈದರೆ ಸಹಿಸದ ಸಮುದಾಯ ಇದೆ.
ಜನ ದೇವೇಗೌಡರು, ಕುಮಾರಸ್ವಾಮಿರನ್ನ ಮಾತ್ರ ಸಮುದಾಯದ ನಾಯಕ ಅಂತ ಗುರುತಿಸ್ತಾರೆ.
ನಮ್ಮನ್ನ ಸಮುದಾಯದ ಲೀಡರ್ ಅಂತ ಯಾವಾಗ ಸ್ವೀಕಾರ ಮಾಡ್ತಾರೋ ಗೊತ್ತಿಲ್ಲ ಎಂದು  ಸಿಪಿವೈ ಹೇಳಿದರು.

RELATED ARTICLES

Related Articles

TRENDING ARTICLES