Thursday, December 19, 2024

ಬೂತ್​ ಮಟ್ಟದಲ್ಲಿ ಗೆಲುವು ಸಾಧಿಸಲು ಗಮನ ಹರಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ನರೇಂದ್ರ ಮೋದಿ

ಮಹರಾಷ್ಟ್ರ : ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಮತಗಟ್ಟೆಗಳನ್ನು ಗೆಲ್ಲುವತ್ತ ತಮ್ಮ ಶಕ್ತಿಯನ್ನು ಕೇಂದ್ರೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರಿಗೆ ಶನಿವಾರ ಕರೆ ನೀಡಿದ್ದಾರೆ.

“ಮೇರಾ ಬೂತ್ ಸಭೆ ಮಜ್ ಬೂತ್” ಕಾರ್ಯಕ್ರಮದ ಭಾಗವಾಗಿ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದದ ಸಂದರ್ಭದಲ್ಲಿ, ಮೋದಿ ಅವರು ಮಹಿಳೆಯರು, ಯುವಕರು ಮತ್ತು ರೈತರ ಬೂತ್ ಮಟ್ಟದ ಸಭೆಗಳನ್ನು ನಡೆಸುವಂತೆ ಕೇಳಿಕೊಂಡರು. ಬಿಜೆಪಿ ನೇತೃತ್ವದ ಸರ್ಕಾರದ ಯೋಜನೆಗಳ ವೀಡಿಯೊಗಳನ್ನು ಪ್ರಚಾರ ಮಾಡುವಂತೆ ಸೂಚಿಸಿದರು.

ಮತದಾರರಲ್ಲಿ ಪಕ್ಷದ ಸಂದೇಶವನ್ನು ಪ್ರಚಾರ ಮಾಡುವಲ್ಲಿ ವೈದ್ಯರಂತಹ ವೃತ್ತಿಪರರನ್ನು ತೊಡಗಿಸಿಕೊಳ್ಳುವಂತೆ ಮೋದಿ ಬಿಜೆಪಿ ಬೂತ್ ಕಾರ್ಯಕರ್ತರನ್ನು ಕೇಳಿದರು. ಮಹಾರಾಷ್ಟ್ರದ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ ಮೋದಿ, ಬಿಜೆಪಿ ಕಾರ್ಯಕರ್ತರು ಈ ಸತ್ಯವನ್ನು ಮತದಾರರಿಗೆ ತಿಳಿಸಬೇಕು ಎಂದು ಹೇಳಿದರು. ನಾನು ಹೋದಲ್ಲೆಲ್ಲಾ ನಮ್ಮ ಕಾರ್ಯಕರ್ತರ ಶ್ರಮವನ್ನು ನೋಡಿದ್ದೇನೆ ಎಂದು ಮೋದಿ ಹೇಳಿದರು.

RELATED ARTICLES

Related Articles

TRENDING ARTICLES