Sunday, December 22, 2024

ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತರು ಸೇರಿ ಏಳು ಜನ ಸಾವು

ಉತ್ತರಪ್ರದೇಶ: ಡೆಹ್ರಾಡೂನ್-ನೈನಿತಾಲ್ ಹೆದ್ದಾರಿಯಲ್ಲಿ ಧಮ್‌ಪುರದ ಅಗ್ನಿಶಾಮಕ ಠಾಣೆ ಬಳಿ ಶನಿವಾರ (ನ.16) ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜಾರ್ಖಂಡ್‌ನಿಂದ ವಾಪಸಾಗುತ್ತಿದ್ದ ನವವಿವಾಹಿತರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಡೆಹ್ರಾಡೂನ್-ನೈನಿತಾಲ್ ಹೆದ್ದಾರಿಯಲ್ಲಿ ಧಮ್‌ಪುರದ ಅಗ್ನಿಶಾಮಕ ಠಾಣೆ ಬಳಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ನವವಿವಾಹಿತ ಜೋಡಿ ಹಾಗೂ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಟೆಂಪೋಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ನಂತರ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಅವರು ತಿಳಿಸಿದ್ದಾರೆ.

ಈ ಅಪಘಾತದಲ್ಲಿ ಒಟ್ಟು 7 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ದೊರೆತಿದೆ.

RELATED ARTICLES

Related Articles

TRENDING ARTICLES