Sunday, December 22, 2024

ಶಬರಿಮಲೆ ಮಾರ್ಗದ KSRTC ಬಸ್‌ಗೆ ಬೆಂಕಿ: ಯಾವುದೇ ಪ್ರಾಣಾಪಾಯ ಇಲ್ಲ

ಕೇರಳ : ಕೇರಳದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ KSRTC (Kerala state road transport Corporation)  ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ದು. ಯಾರಿಗು ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಮಾಹಿತಿ ದೊರೆತಿದೆ.

ವಾಹನದಿಂದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಹೊರಹೊಮ್ಮುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ನಿಲ್ಲಿಸಿದ್ದಾನೆ. ಬಸ್ಸಿಗೆ ಭಾಗಶಃ ಹಾನಿಯಾಗಿದ್ದರೂ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ. ಕೇರಳದ ಶಬರಿಮಲೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಭಾನುವಾರ ಮುಂಜಾನೆ ಬೆಂಕಿ ಹೊತ್ತಿಕೊಂಡಿದೆ.

ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಲು ಪಂಪಾದಿಂದ ನಿಲಕ್ಕಲ್‌ಗೆ ತೆರಳುತ್ತಿದ್ದ ಖಾಲಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಳಕ್ಕಯಂ ಮತ್ತು ನಿಲಕ್ಕಲ್ ನಡುವಿನ ಅರಣ್ಯದಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ವಾಹನದಿಂದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಹೊರಹೊಮ್ಮುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ನಿಲ್ಲಿಸಿದ್ದಾನೆ. ಬಸ್ಸಿಗೆ ಭಾಗಶಃ ಹಾನಿಯಾಗಿದ್ದರೂ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ.

RELATED ARTICLES

Related Articles

TRENDING ARTICLES