Wednesday, January 22, 2025

ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ ಕಾರು

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಬಳಿ ಪೆಟ್ರೋಲ್​ ಹಾಕುವಾಗ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು. ಕಾರಿನಲ್ಲಿದ್ದ 5 ಜನ ಕ್ಷಣಾರ್ದದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು.ಮಹಮ್ಮದ್ ಸನಾವುಲ್ಲಾ ಎಂಬುವರಿಗೆ ಸೇರಿದ ಓಮಿನಿ ಕಾರು ಬೆಂಕಿಗೆ ಆಹುತಿಯಾಗಿದೆ. ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ  ಕಾರಿನಲ್ಲಿ ಪೆಟ್ರೋಲ್​ ಖಾಲಿಯಾದ ಹಿನ್ನಲೆ ಕಾರಿಗೆ ಪೆಟ್ರೋಲ್​​ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ಬೆಂಕಿ ಹೊತ್ತಿರುವುದನ್ನು ಅರಿಯುತ್ತಿದ್ದಂತೆ ಕಾರಿನಲ್ಲಿದ್ದ ಎಲ್ಲರು ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದು. ಐದು ಜನರಲ್ಲಿ ಕೇವಲ ಒಬ್ಬರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮಾಹಿತಿ ದೊರೆತಿದೆ. ಘಟನೆ ಸಂಬಂಧ ಮಾಳೂರು ಪೋಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES