Tuesday, December 24, 2024

ರಾಹುಲ್ ಹೇಳಿಕೆಗಳನ್ನು ಗಂಭೀರವಾಗಿ ತೆಗೆದಕೊಳ್ಳಬಾರದು: ನಿತಿನ್​ ಗಡ್ಕರಿ

ಮುಂಬೈ:  ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಹೇಳಿಕೆಗಳನ್ನು ಯಾರೂ ಗಂಭೀರವಾಗಿ ತೆಗೆದಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ.

ಚುನಾವಣೆ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ ಜನರು ಬಿಜೆಪಿ ನೇತೃತ್ವದ ಮೈತ್ರಿಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರಂತೆ ನೆನಪಿನ ಶಕ್ತಿಯ ಸಮಸ್ಯೆಯಿದೆ ಎಂಬ ರಾಹುಲ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಗಡ್ಕರಿ, ರಾಹುಲ್ ಗಾಂಧಿ ಮಾತನಾಡುವ ಶೈಲಿ, ಅವರ ಹೇಳಿಕೆಗಳನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದರು.

ನಾವು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ, ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ತಿದ್ದುಪಡಿ ಮಾಡುತ್ತೇವೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ ಎಂದು ಕಾಂಗ್ರೆಸ್‌ನವರು ಒಂದು ಕಥೆಯನ್ನು ಕಟ್ಟಿದ್ದಾರೆ. ಸಂವಿಧಾನವನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ನಾವು ಅದನ್ನು ಮಾಡುವುದಿಲ್ಲ. ಇತರರನ್ನು ಕೂಡ ಮಾಡಲು ಬಿಡುವುದಿಲ್ಲ ಎಂದು ನಿತಿನ್​ ಗಡ್ಕರಿ ಮಹರಾಷ್ಟ್ರ ಚುನಾವಣಾ ಪ್ರಚಾರದಲ್ಲಿ  ಹೇಳಿದರು.

RELATED ARTICLES

Related Articles

TRENDING ARTICLES