Monday, December 23, 2024

ಅಮೇರಿಕದಲ್ಲಿ ಲಾರೆನ್ಸ್​​ ಬಿಷ್ಣೋಯ್ ತಮ್ಮನ ಬಂಧನ

ಕ್ಯಾಲಿಫೋರ್ನಿಯಾ:  ಎನ್​ಸಿಪಿ ಮುಖಂಡ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್​ ನನ್ನು ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಬಂದಿಸಲಾಗಿದೆ.

ಕ್ಯಾಲಿಫೋರ್ನಿಯಾ ಪೊಲೀಸರು ಅನ್ಮೋಲ್​​ ಬಿಷ್ಣೋಯ್​ ನನ್ನು ವಶಕ್ಕೆ ತೆಗೆದುಕೊಂಡಿದ್ದು ಆತನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಎನ್​ಐಎ ಮತ್ತು ಮುಂಬೈ ಪೊಲೀಸರು ಮನವಿ ಸಲ್ಲಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಮತ್ತು ಆತನ ಸಹೋದರ ಅನ್ಮೋಲ್ ಬಿಷ್ಣೋಯ್ ಹಲವು ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಈಗಾಗಲೇ ಅತಿ ಭದ್ರತೆಯ ಯರವಾಡ ಜೈಲಿನಲ್ಲಿದ್ದು, ಅಲ್ಲಿಂದಲೇ ತನ್ನ ಭೂಗತ ಚಟುವಟಿಕೆಗಳನ್ನು ನಿಯಂತ್ರಿಸುತ್ತಿದ್ದ, ಮತ್ತೊಂದೆಡೆ ಅಮೇರಿಕಾದಲ್ಲಿ ತಲೆ ಮರೆಸಿಕೊಂಡಿದ್ದ ಅನ್ಮೋಲ್ ಬಿಷ್ಣೋಯ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭೂಗತ ಪ್ರಪಂಚವನ್ನು ಆಳುತ್ತಿದ್ದ. ಅನ್ಮೋಲ್ ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಸಹ ಜೀವ ಬೆದರಿಕೆ ಒಡ್ಡಿದ್ದು, ಚಿತ್ರನಟನ ಮನೆಯ ಮುಂಬಾಗದಲ್ಲಿ ಗುಂಡು ಹಾರಿಸಿದ್ದರು. ಈ ಘಟನೆ ಸಂಬಂಧ ತನಿಖೆ ಕೈಗೆತ್ತಿಕೊಂಡ ಮುಂಬೈ ಪೊಲೀಸರು ಬಿಷ್ಣೋಯ್​ ನ ಇಬ್ಬರು ಸಹಚರರನ್ನು ವಶಕ್ಕೆ ಪಡೆದುಕೊಂಡಿದ್ದರು.

RELATED ARTICLES

Related Articles

TRENDING ARTICLES