Tuesday, January 21, 2025

27ನೇ ಆವೃತ್ತಿಯ ಬೆಂಗಳೂರು ಟೆಕ್​ ಶೃಂಗ ಸಭೆಗೆ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ರಾಜಧಾನಿಯಲ್ಲಿ ನಡೆಯುತ್ತಿರುವ ಅತಿ ದೊಡ್ಡ ಟೆಕ್​ ಶೃಂಗಸಭೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು. ಇಂದಿನಿಂದ(ನ.19) ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ಸರ್ಕಾರ ಹಾಗೂ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ ಆಫ್ ಇಂಡಿಯಾ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು. ಬೆಂಗಳೂರು ಟೆಕ್ ಸಮ್ಮಿಟ್​ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ರ್ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​,  ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ದೊರೆತಿದೆ.

ಬೆಂಗಳೂರು ಟೆಕ್ ಸಮ್ಮಿಟ್ ನ ಮುಖ್ಯಾಶಗಳು..

  • ಸ್ಟಾರ್ಟ್‌ಅಪ್ ಬೆಳವಣಿಗೆಗೆ ಉತ್ತೇಜನ ನೀಡುವ ವೇದಿಕೆಯಾಗಿದೆ.
  • ಸ್ಟಾರ್ಟ್ಅಪ್ ಕಾನ್ಕ್ಲೇವ್- ಪ್ರಖ್ಯಾತ ಡಿಜಿಟಲ್ ಕಥೆಗಾರ ಮತ್ತು ನಾಸ್ ಡೈಲಿಯ ಸಂಸ್ಥಾಪಕ ನುಸೇರ್ ಯಾಸಿನ್ ಅವರಿಂದ ಕಾರ್ಯಕ್ರಮ
  • ಉತ್ಪನ್ನ ಲಾಂಚ್ ಅರೆನಾ- 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ 50ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗಾಗಿ ಲಾಂಚ್‌ಪ್ಯಾಡ್

RELATED ARTICLES

Related Articles

TRENDING ARTICLES