Wednesday, January 22, 2025

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟ್ ಆಟಗಾರ ಸೂರ್ಯ ಕುಮಾ‌ರ್ ಯಾದವ್‌ ಭೇಟಿ

ಕುಕ್ಕೆ ಸುಬ್ರಮಣ್ಯ :  ಭಾರತದ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಜೊತೆ ರಾಜ್ಯದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

ಸೂರ್ಯಕುಮಾ‌ರ್ ದಂಪತಿ ಇಲ್ಲಿನ ಶ್ರೀಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಸೇವೆ, ಹಾಗೂ ನಾಗ ಪ್ರತಿಷ್ಠಾಪನ ಪೂಜೆಯನ್ನು ನೆರವೇರಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ದಂಪತಿಯನ್ನು ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಶಾಲು ಹೊದಿಸಿ ಗೌರವಿಸಿದರು. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಹಾಗೂ ದೇವಸ್ಥಾನದ ಸಿಬ್ಬಂದಿ ಜೊತೆಯಲ್ಲಿದ್ದರು.

RELATED ARTICLES

Related Articles

TRENDING ARTICLES