ಬೆಳಗಾವಿ : ರಾಜ್ಯದಲ್ಲಿ ಚಳಿಗಾಲದ ಅಧಿವೇಶನ ಡಿಸೆಂಬರ್ 9ರಿಂದ ಆರಂಭವಾಗಲಿದೆ ಎಂದು ಮಾಹಿತಿ ದೊರೆತಿದ್ದು. ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 9ರಿಂದ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಸಲ್ಲಿಸಿದ್ದ ಮನವಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.
ಡಿಸೆಂಬರ್ 09ರಂದು ಬೆಳಗಾವಿಯ ಸುವರ್ಣ ಸೌದದಲ್ಲಿ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು. ಈ ಬಾರಿಯ ಅಧಿವೇಶನದಲ್ಲಿ ರಾಜ್ಯಸರ್ಕಾರದ ಹಗರಣಗಳನ್ನು ಬಳಸಿಕೊಂಡು ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಸಿದ್ದತೆ ನಡೆಸಿದ್ದು. ವಕ್ಷ್ ಸೇರಿದಂತೆ ಅಬಕಾರಿ ಹಗರಣಗಳ ಆರೋಪವನ್ನು ಅಧಿವೇಶನದಲ್ಲಿ ಚರ್ಚಿಸಿ ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯೋಜನೆ ರೂಪಿಸಿಕೊಂಡಿವೆ.