Wednesday, November 20, 2024

ಜಂತಕಲ್ ಮೈನಿಂಗ್ ಪ್ರಕರಣ: ಕುಮಾರಸ್ವಾಮಿಗೆ ಸಂಕಷ್ಟ

ದೆಹಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮೇಲಿನ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಇಂದು ಸುಪ್ರೀಂಕೋರ್ಟ್​ ಅರ್ಜಿ ವಿಚಾರಣೆ ನಡೆಸಿದ್ದು. ಸುಪ್ರೀಂಕೋರ್ಟ್​ನ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದೆ.

ಜಂತ್​​ಕಲ್​​ ಮೈನಿಂಗ್​​ ಪ್ರಕರಣದಲ್ಲಿ 150 ಕೋಟಿ ಕಿಕ್​ಬ್ಯಾಕ್ ಪಡಿರುವ ಆರೋಪ ಎದುರುಸುತ್ತಿರುವ ಕುಮಾರಸ್ವಾಮಿ ವಿರುದ್ದ 2017 ರಲ್ಲಿ SIT ಗೆ 3 ತಿಂಗಳೊಳಗೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಆದರೆ ಇದರ ಕುರಿತು ಯಾವುದೇ ಬೆಳವಣಿಗೆಗಳು ಆಗಿರಲಿಲ್ಲ.

ಆದರೆ ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಪರಸ್ಪರ ರಾಜಕೀಯ ಚರ್ಚೆಗೆ ಈಡಾಗಿದ್ದ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಕುಮಾರಸ್ವಾಮಿಯಿಂದ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಗೆ ಹೋಗುವಂತೆ ಸವಾಲು ಹಾಕಿದ್ದರು. ಸವಾಲು ಸ್ವೀಕರಿಸಿದ ಸರ್ಕಾರ ಇದೀಗ ಸುಪ್ರೀ ಕೋರ್ಟ್​ಗೆ ಮೆಟ್ಟಿಲೇರಿದೆ. ಅದರ ಮುಂದುವರಿದ ಭಾಗವಾಗಿ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.

ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ, ಮಾಜಿ ಸಿಎಂಗಳಾದ ಎಸ್.ಎಂ. ಕೃಷ್ಣ ಮತ್ತು ದಿವಂಗತ ಧರ್ಮಸಿಂಗ್ ಈ ಆರೋಪ ಎದುರಿಸುತ್ತಿದ್ದಾರೆ. ಇವರ ಜೊತೆಗೆ ಅಧಿಕಾರಿಗಳಾದ ಗಂಗರಾಮ್ ಬಡೇರಿಯಾ ಸೇರಿದಂತೆ ಹಲವು ಅಧಿಕಾರಿಗಳ ಹೆಸರು ಪ್ರಕರಣದಲ್ಲಿ ಉಲ್ಲೇಖವಿದೆ.

RELATED ARTICLES

Related Articles

TRENDING ARTICLES