ದೆಹಲಿ : ಇಂದು ರಾತ್ರಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಲಿದ್ದು.ನಾಳೆ ದೆಹಲಿಯಲ್ಲಿ ನಡೆಯಲಿರುವ ನಂದಿನಿ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ನಂತರ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಮಾಹಿತಿ ದೊರೆತಿದೆ.
ನಂದಿನಿ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಿಎಂ ಬಳಿಕ ಹೈ ಕಮಾಂಡ್ ನಾಯಕರನ್ನ ಭೇಟಿಯಾಗಲಿದ್ದಾರೆ ಎಂದು ಮಾಹಿತಿ ದೊರೆತಿದೆ. ಹೈ ಕಮಾಂಡ್ ನಾಯಕರ ಜೊತೆಗೆ ರಾಜ್ಯದ ಪ್ರಸ್ತುತ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಿಎಂ ನಂತರ ಹಿರಿಯ ವಕೀಲರ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿ ದೊರೆತಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ನೋಟಿಸ್ ಜಾರಿ ಸಾಧ್ಯತೆ ಹಿನ್ನಲೆ ಇಡಿ ಯಿಂದ ನೋಟಿಸ್ ಜಾರಿಯಾದರೆ ಯಾವ ರೀತಿಯ ಕಾನೂನು ಹೋರಾಟ ಮಾಡಬೇಕೆಂದು ಚರ್ಚೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ತಜ್ಞರಿಂದ ಒಂದಷ್ಟು ಸಲಹೆ ಪಡೆಯಲಿದ್ದಾರೆ ಎಂದು ಮಾಹಿತಿ ದೊರೆತಿದೆ.
ಹೈಕಮಾಂಡ್ ಭೇಟಿ ವೇಳೆ ರಾಜ್ಯದ ಇತ್ತೀಚಿನ ರಾಜಕೀಯ ವಿದ್ಯಮಾನ ಕುರಿತು ಮಾಹಿತಿ ನೀಡಲಿರುವ ಸಿಎಂ
ಮೂರು ಉಪ ಚುನಾವಣೆ ,ವಕ್ಫ್ ವಿವಾದ, ವಿಪಕ್ಷಗಳ ಹೋರಾಟದ ಬಗ್ಗೆಯು ಚರ್ಚೆ ನಡೆಸಲಿದ್ದು ವಕ್ಫ್ ವಿವಾದ ಬಗೆಹರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಹೈಕಮಾಂಡ್ ಗೆ ಮಾಹಿತಿ ನೀಡಲಿದ್ದಾರೆ ಎಂದು ಮಾಹಿತಿ ದೊರೆತಿದೆ.