Sunday, December 22, 2024

ಲಂಚ ನೀಡಿದ ಆರೋಪ : ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ

ನ್ಯೂಯಾರ್ಕ :  ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗ‌ರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಸುಮಾರು ₹2,237 ಕೋಟಿ ಲಂಚದ ಆರೋಪದಲ್ಲಿ ಗೌತಮ್ ಅದಾನಿ, ಸಾಗರ್ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್ ವಿರುದ್ಧ ಐದು ಅಂಶಗಳ ಕ್ರಿಮಿನಲ್‌ ಆರೋಪಪಟ್ಟಿಯನ್ನು ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯಕ್ಕೆ ಅಮೆರಿಕದ ಪ್ರಾಸಿಕ್ಯೂಟ‌ರ್ ಸಲ್ಲಿಸಿದ್ದರು. ಭಾರತದಲ್ಲಿ ಬೃಹತ್ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗಾಗಿ ಮುಂದಿನ 20 ವರ್ಷಗಳಲ್ಲಿ 2 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಆಕರ್ಷಿಸಲು ಭಾರತದ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿದ ಹಾಗೂ ಅಮೆರಿಕ ಒಳಗೊಂಡಂತೆ ವಿದೇಶಿ ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ ಆರೋಪವು ಇವರ ಮೇಲಿದೆ ಎಂದು ಮಾಹಿತಿ ದೊರತಿದೆ.

RELATED ARTICLES

Related Articles

TRENDING ARTICLES