ಬಳ್ಳಾರಿ : ಭಾರೀ ಕುತೂಹಲ ಮೂಡಿಸಿದ್ದ ರಾಜ್ಯ ಉಪಚುನಾವಣೆ ಕಣದ ಫಲಿತಾಂಶ ಹೊರಬಂದಿದ್ದು. ತುಕಾರಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಂಡೂರು ಕ್ಷೇತ್ರದಲ್ಲಿ ಅವರ ಪತ್ನಿ ಅನ್ನಪೂರ್ಣ ತುಕಾರಂ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಬಂಗಾರು ಹನುಮಂತುವಿಗೆ ಭಾರೀ ಮುಖಭಂಗವಾಗಿದೆ. ಈ ಬಾರಿ ಸಂಡೂರು ವಉಪಚುನಾವಣೆಯು ರಾಜ್ಯದ ಜನರ ಕುತೂಹಲ ಮೂಡಿಸಿದ್ದು. ಬಿಜೆಪಿ ಮತ್ತು ಕಾಂಗ್ರೆಸ್ನ ಪ್ರಮುಖ ನಾಯಕರು ಪ್ರಚಾರ ಮಾಡಿ ತಮ್ಮಅಭ್ಯರ್ಥಿಗಳಿಗೆ ಮತ ನೀಡುವಂತೆ ಯಾಚಿಸಿದ್ದರು. ಆದರೆ ಮತದಾರರು ಕಾಂಗ್ರೆಸ್ನ ಅನ್ನಪೂರ್ಣ ತುಕಾರಂ ಮೇಲೆ ತಮ್ಮ ಒಲವನ್ನು ತೋರಿಸಿದ್ದು. ಕಾಂಗ್ರೆಸ್ ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಸಫಲವಾಗಿದೆ.
16ನೇ ಸುತ್ತಿನ ಕೊನೆ ಹಂತದ ಮತಎಣಿಕೆ ಕಾರ್ಯ ಮುಗಿದಿದ್ದು. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಒಟ್ಟು 83368 ಮತಗಳನ್ನು ಪಡೆದಿದ್ದರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 74487 ಮತಗಳನ್ನು ಪಡೆದಿದ್ದಾರೆ. ಒಟ್ಟು 8881 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದು. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ.