Sunday, December 29, 2024

ಕರ್ನಾಟಕ ಪಂಜಾಬ್​ ಹೊರತುಪಡಿಸಿ ವಿವಿಧ ರಾಜ್ಯಗಳ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ

ದೆಹಲಿ : ಅಸ್ಸಾಂ, ಪಂಜಾಬ್, ಮಧ್ಯಪ್ರದೇಶ, ಸಿಕ್ಕಿಂ ರಾಜ್ಯಗಳಲ್ಲಿನ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಎಎಪಿ ಪಕ್ಷಗಳು ಜಯ ಸಾಧಿಸಿವೆ. ಅಸ್ಸಾಂ ರಾಜ್ಯದ 4 ಸ್ಥಾನಗಳ ಪೈಕಿ 2ರಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಅಸ್ಸಾಂ ಗಣ ಪರಿಷತ್ ಹಾಗೂ ಮತ್ತೊಂದು ಕ್ಷೇತ್ರದಲ್ಲಿ ಯುಪಿಪಿ ಪಕ್ಷ ಗೆಲುವು ದಾಖಲಿಸಿದೆ.

ಪಂಜಾಬ್ ರಾಜ್ಯದ 4 ವಿಧಾನಸಭಾ ಕ್ಷೇತ್ರಗಳಲ್ಲಿ ಎಎಪಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಒಂದು ಸ್ಥಾನದಲ್ಲಿ ಗೆಲುವು ದಾಖಲಿಸಿದೆ. ಬಿಜೆಪಿ ಶೂನ್ಯ ಸಂಪಾದನೆ ಮಾಡಿದೆ. ಮಧ್ಯಪ್ರದೇಶದ 2 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, ಸಿಕ್ಕಿಂನ ಎರಡರಲ್ಲೂ ಎಸ್‌ಕೆಎಂ ಪಕ್ಷ ಜಯ ಸಾಧಿಸಿದೆ. ಉಳಿದಂತೆ ಗುಜರಾತ್‌, ಛತೀಸ್‌ಗಢ ಉತ್ತರಾಖಂಡ್ ರಾಜ್ಯಗಳ ತಲಾ ಒಂದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳನ್ನು ಗೆದ್ದುಕೊಂಡಿದೆ.

RELATED ARTICLES

Related Articles

TRENDING ARTICLES