ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ದಾಸ ದರ್ಶನ್ಗೆ ಮತ್ತೆ ಕಂಟಕ ಎದುರಾಗಿದ್ದು. ಪೋಲಿಸರಿಂದ ಹೆಚ್ಚುವರಿ ಜಾರ್ಜ್ಶೀಟ್ ಸಲ್ಲಿಕೆಯಾಗಿದೆ. ಸುಮಾರು 1300 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದು. 20ಕ್ಕೂ ಹೆಚ್ಚು ಸಾಕ್ಷಿಗಳು ಮತ್ತು ಎಫ್ಎಸ್ಎಲ್ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.
ಡಿ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ,ದಾಸನಿಗೆ ಮತ್ತಷ್ಟು ಕಂಟಕ ಎದುರಾಗುವ ಸಾಧ್ಯತೆ ಇದೆ. ಕೊಲೆ ಪ್ರಕರಣದ ಪ್ರತ್ಯಕ್ಷದರ್ಶಿ ಪುನೀತ್ ಎಂಬುವವನ ಪೋನ್ನಿಂದ ದರ್ಶನ ಆರೋಪಿಗಳು ಜೊತೆ ತೆಗೆಸಿಕೊಂಡಿರು ಪೋಟೋಗಳನ್ನು ರಿಟ್ರೀವ್ ಮಾಡಿದ್ದು. ಕೊಲೆಯಾದ ಸ್ಥಳದಲ್ಲಿ ದರ್ಶನ್ ಇದ್ದ ಎಂಬುದಕ್ಕೆ ಬಲವಾದ ಸಾಕ್ಷಿ ದೊರಕಿದಂತಾಗಿದೆ.
ಈಗಾಗಲೇ ಸುಮಾರು 4 ಸಾವಿರಕ್ಕೂ ಹೆಚ್ಚು ಪುಟಗಳ ಚಾರ್ಜ್ಸಲ್ಲಿಕೆ ಮಾಡಿರುವ ಪೋಲಿಸರು ನೆನ್ನೆ ಸುಮಾರು 1300 ಪುಟಗಳ ಹೆಚ್ಚುವರಿ ಚಾರ್ಜ್ಶಿಟ್ ಸಲ್ಲಿಕೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ. ಚಾರ್ಜಶೀಟ್ನಲ್ಲಿ. 20ಕ್ಕೂ ಹೆಚ್ಚು ಸಾಕ್ಷಿಗಳು, ಹಲವು ಎಫ್ಎಸ್ಎಲ್ ವರದಿಗಳನ್ನು ಉಲ್ಲೇಖಿಸಿದ್ದು. ರಿಟ್ರೀವ್ ಮಾಡಿರುವ ದರ್ಶನ್ ಪೋಟೋಗಳನ್ನು ಆಧಾರವಾಗಿಟ್ಟುಕೊಂಡು ಮಧ್ಯಂತರ ಜಾಮೀನನ್ನು ರದ್ದುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆ ಮಾಡುವ ಸಂಭವವಿದೆ ಎಂದು ಮಾಹಿತಿ ದೊರೆತಿದೆ.
ಮೆಡಿಕಲ್ ಆಧಾರ ಮೇಲೆ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ದರ್ಶನ. ಜಾಮೀನು ಪಡೆದು ಮೂರು ವಾರವಾಗಿದ್ದರು ಇನ್ನು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಆಸ್ಪತ್ರೆಯಲ್ಲಿ ಕಳ್ಳಾಟ ಆಡುತ್ತಿದ್ದಾನೆ. ಈ ಎಲ್ಲಾ ಅಂಶಗಳನ್ನು ಇಟ್ಟುಕೊಂಡು ತನಿಖಾಧಿಕಾರಿ ಪರ ವಕೀಲರು ಸುಪ್ರೀಂಕೋರ್ಟ್ಗೆ ಜಾಮೀನು ರದ್ದು ಮಾಡುಲು ಮೇಲ್ಮನವಿ ಸಲ್ಲಿಕೆ ಮಾಡುತ್ತಾರೆ ಎಂದು ಮಾಹಿತಿ ದೊರೆತಿದೆ.