Thursday, December 26, 2024

ಕೊಹ್ಲಿ, ಜೈಸ್ವಾಲ್​ ಶತಕ : ಆಸ್ಟ್ರೇಲಿಯಾಗೆ 534 ರನ್​ಗಳ ಬೃಹತ್​ ಗುರಿ

ಪರ್ತ್: ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಬಾರಿಸಿದ ಆಕರ್ಷಕ ಶತಕಗಳ ನೆರವಿನಿಂದ ಟೀಂ ಇಂಡಿಯಾ, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತ ದಾಖಲಿಸಿದೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಕಳೆದುಕೊಂಡು 487 ರನ್ ಬಾರಿಸಿದ್ದು, ಆಸೀಸ್‌ಗೆ ಮೊದಲ ಟೆಸ್ಟ್ ಗೆಲ್ಲಲು 534 ರನ್‌ಗಳ ಕಠಿಣ ಗುರಿ ನೀಡಿದೆ.

ಇಲ್ಲಿನ ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 177 ರನ್ ಗಳಿಸಿದ್ದ ಟೀಂ ಇಂಡಿಯಾ ಮೂರನೇ ದಿನದಾಟದ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು. ಯಶಸ್ವಿ ಜೈಸ್ವಾಲ್ ಹಾಗೂ ಕೆ ಎಲ್ ರಾಹುಲ್ ಮೊದಲ ವಿಕೆಟ್‌ಗೆ ದಾಖಲೆಯ 201 ರನ್‌ಗಳ ಜತೆಯಾಟವಾಡಿದರು. ರಾಹುಲ್ 77 ರನ್ ಗಳಿಸಿ ಸ್ಟಾರ್ಕ್‌ಗೆ ವಿಕೆಟ್‌ ಒಪ್ಪಿಸಿದರು.

ಇನ್ನು ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ ಯಶಸ್ವಿ ಜೈಸ್ವಾಲ್, ಆಸೀಸ್‌ ನೆಲದಲ್ಲಿ ತಾನಾಡಿದ ಮೊದಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಸ್ಮರಣೀಯವಾಗಿಸಿಕೊಂಡರು. ಜೈಸ್ವಾಲ್ 297 ಎಸೆತಗಳನ್ನು ಎದುರಿಸಿ 15 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 161 ರನ್ ಗಳಿಸಿ ಮಿಚೆಲ್ ಮಾರ್ಷ್‌ಗೆ ವಿಕೆಟ್ ಒಪ್ಪಿಸಿದರು.

ಒಟ್ಟಾರೆಯಾಗಿ ಆಸ್ಟ್ರೇಲಿಯಾ ತಂಡಕ್ಕೆ 534 ರನ್​ಗಳ ಬೃಹತ್​ ಗುರಿ ನೀಡಿದ್ದು. ಮೊದಲನೆ ಟೆಸ್ಟ್​ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿ ಟೀಮ್​ ಇಂಡಿಯಾ ತಂಡವಿದೆ.

RELATED ARTICLES

Related Articles

TRENDING ARTICLES