Friday, December 27, 2024

ಯುವಕರನ್ನು ರಾಜಕೀಯಕ್ಕೆ ಕರೆತರಲು ಯೋಜನೆ ರೂಪಿಸಿದ ಮೋದಿ

ದೆಹಲಿ:  ಜನವರಿ 11-12 ರಂದು ದೆಹಲಿಯ ಭಾರತ್ ಮಂಟಪದಲ್ಲಿ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ ನಡೆಯಲಿದೆ. ಇದು ರಾಜಕೀಯ ಕುಟುಂಬ ಹಿನ್ನೆಲೆ ಇಲ್ಲದ ಒಂದು ಲಕ್ಷ ಯುವಕರನ್ನು ರಾಜಕೀಯಕ್ಕೆ ಬರುವಂತೆ ಮಾಡುವ ಪ್ರಯತ್ನದ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

116ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನವರಿ 12 ರಂದು ಸ್ವಾಮಿ ವಿವೇಕಾನಂದರ 162 ನೇ ಜಯಂತಿಯನ್ನು ಬಹಳ ವಿಶೇಷವಾಗಿ ಆಚರಿಸಲಾಗುವುದು ಎಂದರು. ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್(NCC) ಅನ್ನು ಶ್ಲಾಘಿಸಿದ ಅವರು, ‘ಎನ್‌ಸಿಸಿ ಮತ್ತು ಅದರ ಹೆಸರು ನನ್ನ ಶಾಲಾ ಮತ್ತು ಕಾಲೇಜು ದಿನಗಳನ್ನು ನೆನಪಿಸುತ್ತದೆ. ನಾನೂ ಎನ್‌ಸಿಸಿ ಕೆಡೆಟ್ ಆಗಿದ್ದು, ಅದರಿಂದ ಪಡೆದ ಅನುಭವ ನನಗೆ ಅತ್ಯಮೂಲ್ಯ ಎಂದು ಆತ್ಮವಿಶ್ವಾಸದಿಂದ ಹೇಳಬಲ್ಲೆ, ಯುವಜನರಲ್ಲಿ ಶಿಸ್ತು, ನಾಯಕತ್ವ ಹಾಗೂ ಸೇವಾ ಮನೋಭಾವನೆಯನ್ನು ಎನ್‌ಸಿಸಿ ತುಂಬುತ್ತದೆ’ ಎಂದರು.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿಯು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಈ ಕಾರ್ಯಕ್ರಮವನ್ನು ಘೋಷಿಸಿದ್ದು. ಮುಂದಿನ 5 ವರ್ಷಗಳಲ್ಲಿ ಯಾವುದೇ ರಾಜಕೀಯ ಹಿನ್ನಲೆಯಿಲ್ಲದ 1 ಲಕ್ಷ ಯುವಕರನ್ನು ರಜಕೀಯಕ್ಕೆ ಕರೆತರುತ್ತೇವೆ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES