Saturday, January 11, 2025

ಉತ್ತರ ಪ್ರದೇಶದಲ್ಲಿ ಮಸೀದಿ ಸಮೀಕ್ಷೆಯನ್ನು ವಿರೋಧಿಸಿ ಹಿಂಸಾಚಾರ ; ಮೂವರ ಸಾ*ವು,

ಉತ್ತರ ಪ್ರದೇಶ: ರಾಜ್ಯದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ನಡೆದಿದೆ. ಬೆಳಿಗ್ಗೆ 7.30ರ ಹೊತ್ತಿಗೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಐದು ಠಾಣೆಗಳ ಪೊಲೀಸರು ಭದ್ರತೆಗಾಗಿ ಸ್ಥಳದಲ್ಲಿದ್ದರು. ಆರಂಭದಲ್ಲಿ ಎಲ್ಲವೂ ಸಹಜ ಸ್ಥಿತಿಯಲ್ಲಿಯೇ ಇತ್ತು. ಬಳಿಕ ಏಕಾಏಕಿ ಬಂದ ಜನರ ಗುಂಪು ಪೊಲೀಸರೊಂದಿಗೆ ವಾಗ್ವಾದ ನಡೆಸಿ ಕಲ್ಲು ತೂರಿದೆ.

ಜನರನ್ನು ಎದುರಿಸಲಾಗದೆ ಪೊಲೀಸರು ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೊವನ್ನು ಎಎನ್‌ಐ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ ಕಲ್ಲು ತೂರುತ್ತಿದ್ದವರನ್ನು ತಡೆಯಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಜಾಮಾ ಮಸೀದಿಯಿದ್ದ ಜಾಗದಲ್ಲಿ ಪುರಾತನ ಹಿಂದೂ ದೇವಾಲಯವಿತ್ತು, ಬಾಬರ್‌ನ ಕಾಲದಲ್ಲಿ ದೇಗುಲ ಕೆಡವಿ ಮಸೀದಿ ಕಟ್ಟಲಾಗಿದೆ. ಹಿಂದೂ ದೇಗುಲಕ್ಕೆ ಸೇರಿದ ಅನೇಕ ಗುರುತುಗಳೂ ಅಲ್ಲಿವೆ ಎಂದು ಆರೋಪಿಸಿ ವಕೀಲ ವಿಷ್ಣು ಶಂಕರ್ ಜೈನ್ ಎನ್ನುವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕೋರ್ಟ್ ವಿಡಿಯೊ ಮತ್ತು ಛಾಯಾಗ್ರಹಣ ಬಳಸಿ ಸಮೀಕ್ಷೆ ನಡೆಸುವಂತೆ ಆದೇಶ ನೀಡಿತ್ತು.

ಘರ್ಷಣೆಯಲ್ಲಿ ಮೂವರು ಸಾವು, ಹಲವರಿಗೆ ಗಾಯ 

ಮಸೀದಿಯ ಸಮೀಕ್ಷೆಗಾಗಿ ಸಮೀಕ್ಷಾ ತಂಡವು ಶಾಹಿ ಜಾಮಾ ಮಸೀದಿಗೆ ಆಗಮಿಸಿದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಉತ್ತರ ಪ್ರದೇಶದ ಸಂಭಾಲ್‌ ದಲ್ಲಿ ಮಸೀದಿಯೊಂದರ ಸಮೀಕ್ಷೆಗೆ ಸಂಬಂಧಿಸಿದಂತೆ ಭಾನುವಾರ ನಡೆದ ಘರ್ಷಣೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಸೀದಿಯ ಸಮೀಕ್ಷೆಗಾಗಿ ಸಮೀಕ್ಷಾ ತಂಡವು ಶಾಹಿ ಜಾಮಾ ಮಸೀದಿಗೆ ಆಗಮಿಸಿದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಮಸೀದಿಯ ಪ್ರಸ್ತುತ ರಚನೆಯನ್ನು ನಿರ್ಮಿಸಲು ದೇವಾಲಯವನ್ನು ಕೆಡವಲಾಗಿದೆ ಎಂಬ ದೂರಿನ ಮೇರೆಗೆ ನ್ಯಾಯಾಲಯವು ಆದೇಶ ನೀಡಿದೆ.

ಭಾರೀ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ನೂರಾರು ಪ್ರತಿಭಟನಾಕಾರರು ಬೀದಿಗಿಳಿದು ಸಮೀಕ್ಷಾ ತಂಡದ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

 

RELATED ARTICLES

Related Articles

TRENDING ARTICLES