ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿಘ್ನೇಶ್ ಅವರು, ಸರ್ಕಾರವು ತಕ್ಷಣವೇ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ಹಿಂತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ರಾಹುಲ್ ಅವರ ಹೆಸರು ಪೌರತ್ವ ದಾಖಲೆಗಳಲ್ಲಿದೆ ಎನ್ನುವುದನ್ನು ನಾವು ಯುಕೆ ಸರ್ಕಾರದ ಜೊತೆ ಸಂವಹನ ಮಾಡಿ ದಾಖಲೆಗಳನ್ನು ಸ್ವೀಕರಿಸಿದ್ದೇವೆ ಎಂದು ಹೇಳಿದರು.
ನಾವು ಎಲ್ಲಾ ದಾಖಲೆಗಳನ್ನು ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿದ್ದೇವೆ. ಭಾರತೀಯ ಕಾನೂನುಗಳ ಅಡಿಯಲ್ಲಿ ದ್ವಿಪೌರತ್ವವನ್ನು ಅನುಮತಿಸಲಾಗುವುದಿಲ್ಲ. ಯಾರಾದರೂ ಮತ್ತೊಂದು ರಾಷ್ಟ್ರದ ಪೌರತ್ವವನ್ನು ತೆಗೆದುಕೊಂಡ ನಂತರ ಭಾರತೀಯ ಪೌರತ್ವವು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಎಂದರು.
ರಾಹುಲ್ ಪೌರತ್ವಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ಮನವಿಯನ್ನು ದೆಹಲಿ ಹೈಕೋರ್ಟ್‌ನಲ್ಲಿ ಮತ್ತು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿಯ ಸ್ಥಿತಿಯನ್ನು ಖಚಿತಪಡಿಸಿದ ನಂತರವೇ ಈ ವಿಷಯವನ್ನು ಆಲಿಸುವುದಾಗಿ ದೆಹಲಿ ಹೈಕೋರ್ಟ್ ಸೂಚಿಸಿದೆ.