ಡಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ಹಿಂಸಾಚಾರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಇಸ್ಕಾನ್ ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದೆ. ಬಾಂಗ್ಲಾದೇಶದ ಮಾಧ್ಯಮಗಳ ಪ್ರಕಾರ, ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಚಿನ್ಮೊಯ್ ಕೃಷ್ಣ ದಾಸ್ ಪ್ರಭು ಅವರು ದೇಶದ ಸಮಗ್ರತೆಯನ್ನು ಮುರಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಮೂಲಕ ಬಾಂಗ್ಲಾದೇಶದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಲಾಗಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಚಿನ್ಮಯ್ ಕೃಷ್ಣ ದಾಸ್ ಅವರು ಹಲವು ಬಾರಿ ಧ್ವನಿ ಎತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ಹಿಂದೂಗಳ ಬೆಂಬಲಕ್ಕಾಗಿ ರ‍್ಯಾಲಿಯನ್ನೂ ನಡೆಸಿದ್ದರು. ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಅಂತರಾಷ್ಟ್ರೀಯವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಬಾಂಗ್ಲಾ ನ್ಯಾಯಾಲಯ !
ದೇಶದ ಸಮಗ್ರತೆಗೆ ವಿರುಧ್ದವಾಗಿ ನಡೆಯುತ್ತಿದ್ದಾರೆ ಎಂದು ಆರೋಪಿಸಿ ಚಿನ್ಮಯ ಕೃಷ್ಣ ದಾಸ್ರನ್ನು ಬಂಧಿಸಿದ್ದು. ಅವರನ್ನು ಇಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ,ವಿಚಾರಣೆ ನಡೆಸಿದ ಬಾಂಗ್ಲಾ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ, ಕೃಷ್ಣದಾಸ್ ಪರ ವಕೀಲರು ಪ್ರಕರಣವನ್ನು ಪುನರ್ ಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.