Friday, January 10, 2025

ಮುಸ್ಲಿಂಮರ ವಿರುದ್ದ ಹೇಳಿಕೆ ನೀಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು : ನಗರದ ಸ್ವತಂತ್ರ ಉದ್ಯಾನವನದಲ್ಲಿ ನಡೆದ ವಕ್ಫ್ ವಿರುದ್ಧದ ಹೋರಾಟದಲ್ಲಿ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ ಮುಸ್ಲಿಂಮರಿಗೆ ಮತದಾನದ ಹಕ್ಕನ್ನು ನೀಡಬಾರದು ಎಂದು ಹೇಳಿದರು. ಈ ಹೇಳಿಕೆ ಬಾರೀ ವಿವಾದಕ್ಕೆ ಕಾರಣವಾಗಿತ್ತು ಮತ್ತು ರಾಜಕೀಯ ಚರ್ಚೆಗು ಎಡೆಮಾಡಿಕೊಟ್ಟಿತ್ತು. ಇದರ ಕುರಿತು ಇಂದು ಸ್ಪಷ್ಟನೆ ನೀಡಿರುವ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರೀಡಂ ಪಾರ್ಕ್​ನಲ್ಲಿ ನಡೆದಿದ್ದ ಈ ಪ್ರತಿಭಟನೆಗೆ ರೈತರು, ಬಿಜೆಪಿಯವರು ಸೇರಿದಂತೆ ಕೆಲವು ಸ್ವಾಮೀಜಿಗಳು ಭಾಗಿಯಾಗಿದ್ದರು. ಈ ಹೋರಾಟದಲ್ಲಿ ಚಂದ್ರಶೇಖರ ಸ್ವಾಮೀಜಿ ನೀಡಿದ ಹೇಳಿಕೆ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಇದರ ಕುರಿತು ಇಂದು ಸ್ಪಷ್ಟನೆ ನೀಡಿದ ಚಂದ್ರಶೇಖರ ಸ್ವಾಮೀಜಿ ‘ನೆನ್ನೆಯ ದಿನ ನಾವು ಬಾಯಿತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ’ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

 

RELATED ARTICLES

Related Articles

TRENDING ARTICLES