Wednesday, January 22, 2025

ಚಂದ್ರಶೇಖರ ಸ್ವಾಮೀಜಿ ವಿರುದ್ದ FIR ದಾಖಲು: ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಮುಸ್ಲಿಂ ಮುಖಂಡ

ಬೆಂಗಳೂರು: ಇತ್ತೀಚೆಗೆ(ನ.26) ನಗರದ ಸ್ವಾತಂತ್ರ್ಯ  ಉದ್ಯಾನವನದಲ್ಲಿ ನಡೆದ ವಕ್ಫ್​ ವಿರುದ್ದದ ಹೋರಾಟದಲ್ಲಿ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಮುಸ್ಲಿಂಮರಿಗೆ ಮತದಾನದ ಹಕ್ಕನ್ನು ನೀಡಬಾರದು ಎಂದು ವಿವಾಧಾತ್ಮಕ ಹೇಳಿಕೆ ನೀಡಿದ್ದರು. ಇದರ ಕುರಿತು ಅವರು ಪತ್ರವನ್ನು ಬರೆದು ವಿಷಾದವನ್ನು ವ್ಯಕ್ತಪಡಿಸಿದ್ದರು. ಆದರೆ ಇದೀಗ ಸೈಯದ್​ ಅಬ್ಬಸ್​ ಎಂಬುವವರು ಸ್ವಾಮೀಜಿ ವಿರುದ್ದ ದೂರು ದಾಖಲಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೈಯದ್​ ಅಬ್ಬಾಸ್​ ನೀಡಿದ ದೂರಿನಲ್ಲಿ ಈ ರೀತಿಯಾಗಿ ವಿವರಿಸಿದ್ದು’ ಭಾರತ ದೇಶದ ಪ್ರಜೆಗಳಾದ ನಾವು, ಸಂವಿಧಾನ ಬದ್ದರಾಗಿ ಈ ದೇಶದಲ್ಲಿ ಜೀವನ ಮಾಡುತ್ತಿದ್ದೇವೆ. ಆದರೆ ಚಂದ್ರಶೇಖರ ಸ್ವಾಮೀಜಿ ಅವರು ಮುಸ್ಲಿಂ ಧರ್ಮದವರನ್ನು ಗುರಿಯಾಗಿಸಿಕೊಂಡು ಅವರ ಭಾವನೆಗಳಿಗೆ ನೋವುಂಟಾಗುವಂತೆ ಮತ್ತು ಎಲ್ಲಾ ಮುಸ್ಲಿಂ ಜನಾಂಗದವರನ್ನು ಶತ್ರು ದೇಶದವರಿಗೆ ಹೋಲಿಸಿ ಮಾತನಾಡುವ ಮೂಲಕ ಮುಸ್ಲಿಂ ಜನರಿಗೆ ಅವಮಾನ ಮಾಡಿರುತ್ತಾರೆ. ಜಾತಿ ಜಾತಿಗಳ ನಡುವೆ ಮತೀಯ ದ್ವೇಷ, ವೈರತ್ವ, ವೈಮನಸ್ಸು ಹುಟ್ಟುವಂತೆ ಪ್ರಚೋದಿಸಿ, ಪ್ರಚೋದನಕಾರಿ ಭಾಷಣ ಮಾಡಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ.

 

RELATED ARTICLES

Related Articles

TRENDING ARTICLES