Tuesday, January 7, 2025

ಭೀಕರ ಅಪಘಾತ : ಸಾರಿಗೆ ಬಸ್ ಪಲ್ಟಿಯಾಗಿ 8 ಮಂದಿ ಸಾವು, ಹಲವರಿಗೆ ಗಾಯ

ಮಹರಾಷ್ಟ್ರ : ಭಂಡಾರಾ ಡಿಪೋದಿಂದ ಗೊಂಡಿಯಾಗೆ ತೆರಳುತ್ತಿದ್ದ ಬಸ್ ಗೊಂಡಿಯಾ-ಅರ್ಜುನಿ ರಸ್ತೆಯ ಬಿಂದ್ರವನ ಟೋಲಾ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ.

ರಾಜ್ಯ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಬಸ್ ನಾಗ್ಪುರದಿಂದ ಗೊಂಡಿಯಾಗೆ ತೆರಳುತ್ತಿತ್ತು ಎನ್ನಲಾಗಿದೆ. ಭಂಡಾರಾ ಡಿಪೋದಿಂದ ಗೊಂಡಿಯಾಗೆ ತೆರಳುತ್ತಿದ್ದ ಬಸ್ ಗೊಂಡಿಯಾ-ಅರ್ಜುನಿ ರಸ್ತೆಯ ಬಿಂದ್ರವನ ಟೋಲಾ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಗೊಂಡಿಯಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ರೂ. 10 ಲಕ್ಷ ನೆರವು ನೀಡುವಂತೆ ಸಾರಿಗೆ ಆಡಳಿತಕ್ಕೆ ಆದೇಶಿಸಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದಿಂದ ಎಂಟು ಮೃತದೇಹಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಸ್ಥಳೀಯ ಆಡಳಿತದಿಂದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ಗಾಯಾಳುಗಳಿಗೆ ತಕ್ಷಣದ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

RELATED ARTICLES

Related Articles

TRENDING ARTICLES