Friday, November 29, 2024

ನರೇಂದ್ರ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ : ಕಳಸ ಬಂಡೂರಿ ಬಗ್ಗೆ ಮಹತ್ವದ ಚರ್ಚೆ

ದೆಹಲಿ : ಇಂದು (ನ.29) ಕರ್ನಾಟಕ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದು. ಕರ್ನಾಟಕದ ಅಭಿವೃದ್ದಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಾರೆ ಎಂದು ಮಾಹಿತಿ ದೊರೆತಿದೆ.

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದು. ಈ ವೇಳೆ ಕರ್ನಾಟಕದ ಅಭಿವೃದ್ದಿ ಕಾರ್ಯಗಳ ಕುರಿತು ಚರ್ಚೆ ಮಾಡಲಿದ್ದಾರೆ ಎಂದು ಮಾಹಿತಿ ದೊರೆತಿದೆ.

ಹಲವು ವರ್ಷಗಳಿಂದ ಪೂರ್ಣಗೊಳ್ಳದೆ ಕುಂಠಿತವಾಗಿರುವ ಕಳಸಾ ಬಂಡೂರಿ – ಭದ್ರ ಮೇಲ್ದಂಡೆ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದು. ಯೋಜನೆ ವಿಶೇಷ ಅನುದಾನವಾಗಿ ಸುಮಾರು 5300 ಕೋಟಿ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲಿದ್ದಾರೆ.

ಇದರ ಜೊತೆಗೆ ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಹೊಸ ಏಮ್ಸ್​​ ಆಸ್ಪತ್ರೆಯನ್ನು ಘೋಷಿಸುವಂತೆ ಮನವಿ ಮಾಡಲಿದ್ದಾರೆ. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಸುಮಾರು  11,495 ಕೋಟಿಗಳಷ್ಟು ರೂಪಾಯಿ ಹಣವನ್ನು ಮಂಜೂರು ಮಾಡುವಂತೆ ಮನವಿ ಮಾಡಲಿದ್ದಾರೆ ಎಂದು ಮಾಹಿತಿ ದೊರೆತಿದೆ.

2023-24ರ ಕೇಂದ್ರ ಬಜೆಟ್‌ನಲ್ಲಿ ನೀಡಿದ ಭರವಸೆಯಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸುಮಾರು 5,000 ಕೋಟಿ ಅನುದಾನ, 2021-26ರ ಅವಧಿಗೆ ಕೆರೆಗಳ ಅಭಿವೃದ್ಧಿಗಾಗಿ ಅನುದಾನ, ಹಾಗೂ ಪೇರಿಫೆರಲ್ ರಿಂಗ್ ರೋಡ್‌ಗಾಗಿ ಶಿಫಾರಸ್ಸು ಮಾಡಿರುವ 6,000 ಕೋಟಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಒತ್ತಾಯಿಸಲಿದ್ದಾರೆ.

ಅದರ ಜೊತೆಗೆ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆಗಾಗಿ  ಮೇಕೆದಾಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್​ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದ್ದು ಅದಕ್ಕೆ ಅನುಮೋದನೆ ನೀಡುವಂತೆ  ಹಾಗೂ ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆಗೆ ಅನುದಾನ ಘೋಷಣೆ ಮಾಡಲಿದ್ದಾರೆ ಎಂದು ಮಾಹಿತಿ ದೊರೆತಿದೆ

RELATED ARTICLES

Related Articles

TRENDING ARTICLES