Thursday, January 9, 2025

ರಾಜ್ಯದಲ್ಲಿ ಹೆಚ್ಚಾಗ್ತಿದೆ ಸಿಸೇರಿಯನ್ ಹೆರಿಗೆಗಳು : ಆರೋಗ್ಯ ಸಚಿವರಿಂದ ಖಡಕ್​ ಸೂಚನೆ

ಬೆಂಗಳೂರು : ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಸಾಲು ಸಾಲು ಬಾಣಂತಿಯರು ಸಾವನ್ನಪ್ಪಿದ ಬೆನ್ನಲ್ಲೆ ಆಘಾತಕಾರಿ ವರದಿಯೊಂದು ಬಂದಿದ್ದು. ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ. ಇದರ ಬಗ್ಗೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಖಡಕ್​ ಸೂಚನೆ ನೀಡಿದ್ದು ರಾಜ್ಯದಲ್ಲಿ ಸಿಸೇರಿಯನ್​ ಹೆರಿಗೆಗಳನ್ನು ಕಡಿಮೆ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಮಾಹಿತಿ ದೊರೆತಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುವ ಶೇ 75-80 ರಷ್ಟು ಹೆರಿಗೆಗಳು ಸಿಸೇರಿಯನ್ ಹೆರಿಗೆಗಳಾಗಿದ್ದು. ಸಿಸೇರಿಯನ್​ ಹೆರಿಗೆಯಿಂದ ತಾಯಿ, ಮಗು ಇಬ್ಬರ ಆರೋಗ್ಯದ ಮೇಲೆ ಪರಿಣಾಮ ಬೀಳಲಿದೆ. ಕೇವಲ ಖಾಸಗಿ ಆಸ್ಪತ್ರೆಯಲ್ಲದೆ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಿಸೇರಿಯನ್​ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದ್ದು. ಸರ್ಕಾರಿ ಆಸ್ಪತ್ರೆಗಳಲ್ಲಿಯೂ ನಡೆಯುವ ಹೆರಿಗೆಯಲ್ಲಿ ಶೇ.35ರಷ್ಟು ಹೆರಿಗೆಗಳು ಸಿಸೇರಿಯನ್​ ಹೆರಿಗೆಯಾಗಿದೆ ಎಂದು ಮಾಹಿತಿ ದೊರೆತಿದೆ.

ಇದರ ಬಗ್ಗೆ ಕ್ರಮ ವಹಿಸಲು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಸೂಚನೆ ನೀಡಿದ್ದು. ಸಿಸೇರಿಯನ್​ ಹೆರಿಗೆಗಳ ಪ್ರಮಾಣ ಶೇಖಡಾ 50ಕ್ಕಿಂತ ಕಡಿಮೆ ಇರಬೇಕು ಎಂದು ಆರೋಗ್ಯಧಾಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಮೇಲೆ ಕಟ್ಟುನಿಟ್ಟಾಗಿ ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮಾಹಿತಿ ದೊರೆತಿದೆ.

RELATED ARTICLES

Related Articles

TRENDING ARTICLES