Sunday, January 5, 2025

ಫೆಂಗಲ್ ಚಂಡಮಾರುತ​ ಎಫೆಕ್ಟ್​ : ಬಿಬಿಎಂಪಿ ಅಧಿಕಾರಿಗಳಿಗೆ ಭಾನುವಾರದ ರಜೆ ರದ್ದು

ಬೆಂಗಳೂರು : ಫೆಂಗಲ್ ಚಂಡಮಾರುತ ಎಫೆಕ್ಟ್ ಬೆಂಗಳೂರಿಗು ತಟ್ಟಲಿದ್ದು, ರಾಜಧಾನಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತಯಿದೆ ಎಂದು ರಾಜ್ಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಪಾಲಿಕೆ ಅಧಿಕಾರಿಗಳ ವಾರದ ರಜೆಯನ್ನು ಬಿಬಿಎಂಪಿ ರದ್ದುಗೊಳಿಸಿದೆ ಎಂದು ಮಾಹಿತಿ ದೊರೆತಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇದರ ಕುರಿತು ಹೇಳಿಕೆ ನೀಡಿದ್ದು. ‘ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದ್ದರಿಂದ ಭಾನುವಾರವಾದರೂ ಕೂಡ ಯಾವ ಅಧಿಕಾರಿಗಳಿಗು ರಜೆ ನೀಡುತ್ತಿಲ್ಲ.ತಗ್ಗು ಪ್ರದೇಶ,ಕೆರೆ ಅಂಗಳದ ಪ್ರದೇಶಗಳಲ್ಲಿ‌ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಒಂದು ವೇಳೆ ನಾಳೆ ಮಳೆಯಿಂದ ಯಾವುದಾದರೂ ತೊಂದರೆಯಾದರೆ ಅದಕ್ಕೆ ಅಧಿಕಾರಿಗಳೇ ನೇರ ಕಾರಣರಾಗುತ್ತಾರೆ. ಅಂತಹ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದ’ ಎಂದು ಹೇಳಿದರು.

 

RELATED ARTICLES

Related Articles

TRENDING ARTICLES