Saturday, November 30, 2024

ಫೆಂಗಲ್​​ ಚಂಡಮಾರುತ ಎಫೆಕ್ಟ್​​ : ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣವಾಗಿರುವ ಚಂಡ ಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಭಾರೀ ಚಳಿಯ ವಾತವರಣ ನಿರ್ಮಾಣವಾಗಿದ್ದು. ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರಿನ ವಾತವರಣ ಫ್ರಿಡ್ಜ್​ನಂತಾಗಿದ್ದು. ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಜಿಟಿ ಜಿಟಿ ಮಳೆ ಆರಂಭವಾಗಿದೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತದ ಎಫೆಕ್ಟ್ ಹಾಗೂ ಫೆಂಗಲ್​ ಚಂಡಮಾರುತದ ಪರಿಣಾಮವಾಗಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಫೆಂಗಲ್​ ಚಂಡಮಾರುತದ ಆಗಮನ !

ಇಂದು ಸಂಜೆ ವೇಳೆಗೆ ಪುದುಚೇರಿ ಕರಾವಳಿ ತೀರಕ್ಕೆ ಫೆಂಗಲ್​ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು. ಗಂಟೆಗೆ 90 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಪುದುಚೇರಿ ಸೇರಿದಂತೆ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಹೈ ಅಲರ್ಟ್​ ಘೋಷಿಸಿದ್ದು. ಶಾಲೆ- ಕಾಳೇಜುಗಳಿಗೆ ರಜೆ ನೀಡಲಾಗಿದೆ.

ಪುದುಚೇರಿಯಲ್ಲಿ ಬಸ್​​ ಸಂಚಾರವನ್ನು ರದ್ದು ಮಾಡಿದ್ದು, ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ(ವರ್ಕ್​ ಫ್ರಮ್​ ಹೋಮ್​) ಸೂಚನೆ ನೀಡಿದ್ದಾರೆ. ಕೆಲವು ತೀರ ಪ್ರದೇಶಗಳಿಂದ ಜನರನ್ನು ಸ್ಥಳಾಂತರ ಮಾಡಿದ್ದು. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.

ಫೆಂಗಲ್​ ಚಂಡಮಾರುತದ ಎಫೆಕ್ಟ್​​ ರಾಜ್ಯದ ಮೇಲೂ ಕೊಂಚ ಪರಿಣಾಮ ಬೀರಲಿದ್ದು. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಡಿಸೆಂಬರ್​ 1 ಮತ್ತು 2ರಂದು ಅತಿಭಾರಿ ಮಳೆಯಾಗುವ ನೀರೀಕ್ಷೆಯಿದ್ದು. ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಣೆ ಮಾಡಿದೆ ಎಂದು ಮಾಹಿತಿ ದೊರೆತಿದೆ.

 

RELATED ARTICLES

Related Articles

TRENDING ARTICLES