ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣವಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲು ತಟ್ಟಿದ್ದು. ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತವರಣದ ಜೊತೆಗೆ ಸಾಧರಣ ಮಳೆಯಾಗುತ್ತಿದೆ. ಇದೀಗ ರಾಜ್ಯ ಹವಮಾನ ಇಲಾಖೆಯಿಂದ ಹೊಸ ಎಚ್ಚರಿಕೆಯೊಂದು ಬಂದಿದ್ದು ಡಿಸೆಂಬರ್ 3ನೇ ತಾರೀಖಿನವರೆಗು ರಾಜ್ಯದ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.
ಫೆಂಗಲ್ ಚಂಡಮಾರುತದ ಪರಿಣಾಮದಿಂದ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು. ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಹಿತಿ ದೊರತಿದೆ. ಇದರ ಪರಿಣಾಮ ರಾಜ್ಯದ ಮೇಲೂ ಆಗಿದ್ದು. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನ ಭಾರಿ ಮಳೆಯಾಗುತ್ತದೆ ಎಂದು ತಿಳಿದುಬಂದಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು. ಇನ್ನು ಡಿಸೆಂಬರ್ 3ನೇ ತಾರೀಖಿನಂದು ರಾಮನಗರ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದ್ದು. ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.