Friday, January 24, 2025

ಫೆಂಗಲ್ ಚಂಡಮಾರುತದ ಅಬ್ಬರ: ಭಾರಿ ಮಳೆಗೆ ಒಂಬತ್ತು ಮಂದಿ ಸಾವು !

ಚೆನೈ : ಫೆಂಗಲ್​ ಚಂಡಮಾರುತದ ಪರಿಣಾಮಾವಾಗಿ ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪಕ್ಕದ ಪುದುಚೇರಿಯಲ್ಲು ಅತ್ಯದಿಕ ಮಳೆಯಾಗಿದ್ದು, ಪುದುಚೇರಿ ಇತಿಹಾಸದಲ್ಲಿಯೇ ಅತ್ಯಧಿಕ ಪ್ರಮಾಣದ ಮಳೆಯಾಗಿದೆ ಎಂದು ಮಾಹಿತಿ ದೊರೆತಿದೆ.

ವಿಲ್ಲುಪುರಂನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು, ಮೈಲಂನಲ್ಲಿನ ಸ್ವಯಂಚಾಲಿತ ಹವಾಮಾನ ಕೇಂದ್ರದಲ್ಲಿ 51 ಸೆಂ.ಮೀ.ನಷ್ಟು ಮಳೆ ಬಿದ್ದಿದೆ. ನಿಧಾನವಾಗಿ ಚಲಿಸುತ್ತಿರುವ ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ಶನಿವಾರ ರಾತ್ರಿಯಿಂದ ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲೆಯ 49 ಸೆಂ.ಮೀ ಮಳೆಯಾಗಿದೆ.

ಅಧಿಕೃತ ಮೂಲಗಳ ಪ್ರಕಾರ, ಪುದುಚೇರಿಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ವರು, ತಿರುವಣ್ಣಾಮಲೈನಲ್ಲಿ ಮೂವರು ಮತ್ತು ವೆಲ್ಲೂರು ಮತ್ತು ಚೆನ್ನೈ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಧರ್ಮಪುರಿ ಮತ್ತು ಸೇಲಂನಲ್ಲಿ ಶಾಲೆಗಳು ಮತ್ತು ತಿರುವಣ್ಣಾಮಲೈ, ಕಡಲೂರು, ವಿಲ್ಲುಪುರಂ, ಪುದುಚೇರಿ ಮತ್ತು ಕೃಷ್ಣಗಿರಿಯಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

RELATED ARTICLES

Related Articles

TRENDING ARTICLES