ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರಿಗೆ ಆರೋಗ್ಯದ ಸಮಸ್ಯೆ ಹಿನ್ನೆಲೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿದ್ದ ನಟ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್ ಆಗಿದೆ.
ಸದ್ಯ ಲಭ್ಯವಾಗಿರುವ ಫೋಟೋದಲ್ಲಿ ದರ್ಶನ್ ಅವರು ಚಿಕಿತ್ಸೆ ಪಡೆಯುವ ಬೆಡ್ ಮೇಲೆ ಮಲಗಿರುವಂತೆ ಕಂಡು ಬಂದಿದೆ. ಮಾತ್ರವಲ್ಲ ಅವರು ತೀವ್ರವಾಗಿ ಬಳಲುತ್ತಿರುವಂತೆ ಫೋಟೊದಲ್ಲಿ ಕಂಡು ಬಂದಿದೆ. ಕಳೆದ 30 ದಿನದಿಂದ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿದಿನ 30 ನಿಮಿಷಗಳ ಫಿಸಿಯೋತೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರಿಗೆ ಇದೇ ವಾರದಲ್ಲಿ ಶಸ್ತ್ರ ಚಿಕಿತ್ಸೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ದರ್ಶನ್ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಅವರ ಆರೋಗ್ಯ ಹೇಗಿದೆ ಎಂದು ಅಭಿಮಾನಿಗಳು ಆತಂಕದಲ್ಲಿದ್ದರು. ಸದ್ಯ ಬಿಡುಗಡೆಯಾಗಿರುವ ಫೋಟೋದಿಂದ ಅವರ ಅಭಿಮಾನಿಗಳು ಸಂತಸಪಡುವಂತಾಗಿದೆ.
ಮತ್ತೊಂದೆಡೆ ದರ್ಶನ್ ರೆಗ್ಯೂಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ನಡುವೆ ದರ್ಶನ್ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದೆ. ತುರ್ತು ಚಿಕಿತ್ಸೆಗಾಗಿಯೇ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಚಿಕಿತ್ಸೆಗಾಗಿಯೇ ದರ್ಶನ್ ಬೆಂಗಳೂರಿಗೆ ಬಂದು 32 ದಿನಗಳು ಮುಗಿದು ಹೋಗಿವೆ. ಇನ್ನೂ 9 ದಿನಗಳು ಕಳೆದರೆ ಮತ್ತೆ ದರ್ಶನ್ ಜೈಲಿಗೆ ವಾಪಸ್ಸಾಗಬೇಕು. ಅಷ್ಟರಲ್ಲಿ ರೆಗ್ಯೂಲರ್ ಬೇಲ್ ಸಿಕ್ಕರೆ ದರ್ಶನ್ ಸೇಫ್ ಅಂತ ಹೇಳಲಾಗ್ತಿದೆ. ಹೇಗಾದ್ರೂ ಮಾಡಿ ದರ್ಶನ್ಗೆ ಬೇಲ್ ಕೊಡಿಸಲೇ ಬೇಕು ಅಂತ ಸಿವಿ ನಾಗೇಶ್ ಹೊಸ ಹೊಸ ಅಸ್ತ್ರಗಳನ್ನ ಪ್ರಯೋಗ ಮಾಡ್ತಿದ್ದಾರೆ
ಸದ್ಯಕ್ಕೆ ದರ್ಶನ್‌ಗೆ ಇನ್ನೂ ಶಸ್ತ್ರಚಿಕಿತ್ಸೆ ಆಗಿಲ್ಲ. ಕಾರಣ, ಅವರು ರಕ್ತದೊತ್ತಡದಿಂದ ಬಳಲ್ತಾ ಇದ್ದಾರಂತೆ. ಬಿಪಿ ಕಂಟ್ರೋಲ್‌ಗೆ ಬಾರದೇ ಇರೋ ಕಾರಣದಿಂದಾಗಿ ಇನ್ನೂ ಸರ್ಜರಿ ಮಾಡಲಾಗಿಲ್ಲವಂತೆ. ಹಾಗಂತ ಸರ್ಜರಿ ಆಗೋದೇ ಇಲ್ಲವಾ? ಈವರೆಗೂ ಅದು ಕಷ್ಟ ಕಷ್ಟ ಅಂತ ನಂಬಲಾಗಿತ್ತು. ಸರ್ಜರಿಗೆ ದರ್ಶನ್ ಮನಸು ಮಾಡದೇ ಇರೋ ಕಾರಣದಿಂದಾಗಿ, ಈ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಈಗ ದರ್ಶನ್ ಸರ್ಜರಿಗೆ ಒಪ್ಪಿಕೊಂಡಿದ್ದಾರೆ ಅನ್ನೋ ಸುದ್ದಿ ಹರಿದಾಡ್ತಾ ಇದೆ. ಸರ್ಜರಿ ಆಗದೇ ಇದ್ದರೆ, ಡಬಲ್ ಸಂಕಷ್ಟ ಎದುರಾಗೋ ಕಾರಣದಿಂದಾಗಿ ಸರ್ಜರಿ ಮಾಡಿಸಿಕೊಳ್ಳೋಕೆ ಒಪ್ಪಿದ್ದಾರೆ ಎಂದು ಹೇಳಲಾಗ್ತಿದೆ.