Wednesday, January 22, 2025

ಯತ್ನಾಳ್​ ವಿರುದ್ದ ಸಿಡಿದೆದ್ದ ಲಿಂಗಾಯತ ಮಹಾಸಭಾ : ಬಂಧನಕ್ಕೆ ಆಗ್ರಹ !

ಮಂಡ್ಯ : ಜಗಜ್ಯೋತಿ ಬಸವಣ್ಣನ ವಿರುದ್ದ ಶಾಸಕ ಬಸನಗೌಡಪಾಟೀಲ್​ ಯತ್ನಾಳ್​ ವಿವಾದಾತ್ಮಕ ಹೇಳಿಕೆ ಹಿನ್ನಲೆಯಲ್ಲಿ ಲಿಂಗಾಯತ ಮಹಾಸಭಾ ಸುದ್ದಿಗೋಷ್ಟಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು. ಯತ್ನಾಳ್​ರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಶಾಸಕ ಯತ್ನಾಳ್​ ವಿರುದ್ದ ಲಿಂಗಾಯತ ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದ್ದು. ವಿಶ್ವಗುರು ಬಸವಣ್ಣನ ಬಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡುವುದು ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಯತ್ನಾಳ್​ರ ವಿರುದ್ದ ಕ್ರಮ ಕೈಗೊಳ್ಳಬೇಕು. ಯತ್ನಾಳ್​ರನ್ನು ಕೂಡಲೇ ರಾಜ್ಯ ಸರ್ಕಾರ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ವಿಜಯೇಂದ್ರ ಯತ್ನಾಳ್​ರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ, ಎಂದು ಕಲ್ಯಾಣ ಬಸವೇಶ್ವರ ಮಠದ ಓಂಕಾರ್ ಸ್ವಾಮೀಜಿ ಹಾಗೂ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮಂಜುನಾಥ್ ಎಚ್ಚರಿಕೆ ನೀಡಿದರು.

 

RELATED ARTICLES

Related Articles

TRENDING ARTICLES