ಆಗ್ರಾ : ತಾಜ್ ಮಹಲ್ ಸ್ಫೋಟಿಸುವುದಾಗಿ ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಗೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲನೆ ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಪ್ರೇಮಸೌಧ ತಾಜ್ ಮಹಲ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಸಹಾಯಕ ಪೊಲೀಸ್ ಕಮಿಷನರ್ ಸಯ್ಯದ್ ಅರೀಬ್ ಅಹ್ಮದ್ ಅವರು ತಿಳಿಸಿದ್ದಾರೆ.
“ತಾಜ್ ಮಹಲ್ ಅನ್ನು ಸ್ಫೋಟಿಸುವು ಬೆದರಿಕೆ ಇರುವ ಇಮೇಲ್ ಅನ್ನು ಉತ್ತರ ಪ್ರದೇಶ ಪ್ರವಾಸೋದ್ಯಮ ಕಚೇರಿ ಸ್ವೀಕರಿಸಿದೆ. ಈ ಕುರಿತು ಇಲಾಖೆಯವರು ನಮಗೆ ಮಾಹಿತಿ ನೀಡಿದ ನಂತರ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಇತರ ತಂಡಗಳು ತಾಜ್ ಮಹಲ್ ಅನ್ನು ಪರಿಶೀಲನೆ ನಡೆಸಿದ್ದು, ಇದು ಹುಸಿ ಬಾಂಬ್ ಬೆದರಿಕೆ ಎಂದು ಅಹ್ಮದ್ ತಿಳಿಸಿದ್ದಾರೆ.ಈ ಸಂಬಂಧ ತಾಜಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ನಕಲಿ ಇಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ.