ದೊಡ್ಡಬಳ್ಳಾಪುರ: ಹಿಟ್ ಆ್ಯಂಡ್ ರನ್ಗೆ ತಾಯಿ ಬಲಿಯಾಗಿ, ಮಗು ಗಂಭೀರವಾಗಿ ಗಾಯಗೊಂಡ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದು. ರಸ್ತೆ ಬದಿ ನಿಂತಿದ್ದ ತಾಯಿ, ಮಗುವಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಮಾಹಿತಿ ದೊರೆತಿದೆ.
ದೊಡ್ಡಬಳ್ಳಾಪುರದ ನಂದಿಮೋರಿ ಬಳಿ ಘಟನೆ ನಡೆದಿದ್ದು. ಶಾಲೆಯಿಂದ ಮಗುವನ್ನು ಕರೆದುಕೊಂಡು ಬರಲು ಹೋಗಿದ್ದ ವೇಳೆ ಅಪಘಾತ ಸಂಭವಿಸಿದೆ. ಭಾನುಪ್ರಿಯ(25) ಎಂಬ ಮಹಿಳೆ ಎಂದಿನಂತೆ ತನ್ನ ಮಗುವನ್ನು ಶಾಲೆಯಿಂದ ಕರೆತರಲು ಶಾಲೆಗೆ ಹೋಗಿ ಮಗುವನ್ನು ಕರೆದುಕೊಂಡು ಬರುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ತಾಯಿ ಮಗುವಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.
ತಲೆಗೆ ತೀವ್ರ ಪೆಟ್ಟಾದ ಹಿನ್ನಲೆ ಭಾನಪ್ರಿಯ ಸ್ಥಳದಲ್ಲೆ ಮೃತಪಟ್ಟಿದ್ದು. ಮಗು ಮನೋಜ್ಗೆ ಗಂಭೀರವಾಗಿ ಗಾಯವಾಗಿದೆ ಎಂದು ಮಾಹಿತಿ ದೊರೆತಿದೆ. ಗಂಭೀರವಾಗಿ ಗಾಯಗೊಂಡಿರುವ ಮಗುವನ್ನು ಬೆಂಗಳೂರಿಗೆ ರವಾನೆ ಮಾಡಿದ್ದು. ಮೃತ ಭಾನುಪ್ರಿಯ ದೇಹವನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ. ದೊಡ್ಡಬಳ್ಳಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.