ಮಂಡ್ಯ : ಕೆ.ಆರ್ ಪೇಟೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನನ್ನ ವಿರುದ್ದ ತನಿಖೆ ನಡೆಸಲು EDಗೆ ಯಾವುದೇ ಅಧಿಕಾರವಿಲ್ಲ. ಅವರು ನನ್ನ ವಿರುದ್ದ ದುರುದ್ದೇಶದಿಂದ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಮಂಡ್ಯದ ಕೆಆರ್ ಪೇಟೆಯಲ್ಲಿ ಮಾತನಾಡಿದ ಅವರು, ಇಡಿ ಬಂದಿರೋದು ರಾಜಕೀಯ ಪ್ರೇರಿತವಾಗಿದೆ. ನಾಳೆ ನ್ಯಾಯಾಲಯದಲ್ಲಿ ಕೇಸ್ ಬರ್ತಾ ಇದೆ. ಸಿಂಗಲ್ ಜಡ್ಜ್ ಬೆಂಚ್‌ನಲ್ಲಿ ಬರುತ್ತೆ. ನಾವು ಹಾಕಿರೋ ಅಪೀಲು ಅದು. ಈಗ ಇ.ಡಿ ಅವರು ಮಾಡ್ತಾ ಇದಾರೆ ಅಂದ್ರೆ ಏನು ಅರ್ಥ? ಇ.ಡಿ ಅವರಿಗೆ ಯಾವುದೇ ಅಧಿಕಾರವೂ ಇಲ್ಲ. ಕೋರ್ಟ್ ಮೇಲೆ ಒತ್ತಡ ಹಾಕಲು ಹೀಗೆ ಮಾಡಿದ್ದಾರೆ. ಲೋಕಾಯುಕ್ತ ತನಿಖೆ ಮಾಡ್ತಾ ಇದ್ದಾರೆ. ತನಿಖೆ ಮಾಡಿ ಅವರು ವರದಿ ನೀಡ್ತಾರೆ. ಲೋಕಾಯುಕ್ತ ಮೇಲೆ ಒತ್ತಡ ಹಾಕಲು ಮಾಡ್ತಾ ಇದ್ದಾರೆ. ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ ಎಂದು ಅಸಮಾಧಾನ ಹೊರಹಾಕಿದರು
ನಾಳೆ ಹೈಕೋರ್ಟ್ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುತ್ತಿದೆ. ನ್ಯಾಯಾಲಯದ ಮೇಲೆ ಒತ್ತಡ ತರಲು ಈ ರೀತಿ ಮಾಡುತ್ತಿದ್ದಾರೆ. ಅದಕ್ಕೆ ಒಂದು ದಿನ ಮುಂಚಿತವಾಗಿ ಲೋಕಯುಕ್ತಗೆ ಪತ್ರ ಬರೆದಿದ್ದಾರೆ. ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತದ ತನಿಖಾ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದು ಹೇಳಿದರು.