Thursday, January 9, 2025

ನೆಚ್ಚಿನ ಶಿಕ್ಷಕರ ಅಮಾನತು: ಪಾದಯಾತ್ರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು !

ಯಾದಗಿರಿ: ನೆಚ್ಚಿನ ಶಿಕ್ಷಕರನ್ನು ಅಮಾನತುಗೊಳಿಸಿದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಸುಮಾರು 5 ಕಿ.ಮೀ ಪಾದಯಾತ್ರೆ ಮಾಡಿ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮಾಹಿತಿ ದೊರೆತಿದೆ.

ಯಾದಗಿರಿಯ, ಶಹಾಪುರ ತಾಲೂಕಿನ ದೋರನಹಳ್ಳಿ ಹತ್ತಿರದ ಬೇವಿನಹಳ್ಳಿ ಕ್ರಾಸ್ ಬಳಿಯಲ್ಲಿನ ಮೋರಾರ್ಜಿ  ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು. ಶಾಲೆಯ ಹಿಂದಿ ಶಿಕ್ಷಕ ಮುಬಾರಕ್ ಹಾಗೂ ಕನ್ನಡ ಉಪನ್ಯಾಸಕ ಶಿವರಾಜ ಬೀರನೂರ್ ಅವರನ್ನು ಅಮಾನತು ಮಾಡಿದ್ದನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ಮೊರಾರ್ಜಿ ದೇಸಾಜಿ ವಸತಿ ಶಾಲೆಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ವಿಧ್ಯಾರ್ಥಿಗಳು ಶಹಾಪುರ ತಹಶೀಲ್ದಾರ್ ಕಛೇರಿಯವರೆಗು ಪಾದಯಾತ್ರೆ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಅದರ ಜೊತೆಗೆ ಹಾಸ್ಟಲ್​ ವಾರ್ಡನ್​ ರಾಹುತಪ್ಪ ದುರ್ವತನೆ ತೋರಿ ವಿಧ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಆರೋಪಿಸಿದ್ದಾರೆ.

ಸುಮಾರು 5 ಕಿ.ಮೀ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು. ಶಿಕ್ಷಕರ ಅಮಾನತನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

 

RELATED ARTICLES

Related Articles

TRENDING ARTICLES