Thursday, December 19, 2024

ಕಚ್ಚಾಡುವುದರಿಂದ ಯಾರಿಗೂ ಲಾಭವಿಲ್ಲ, ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ : ಯಡಿಯೂರಪ್ಪ

ಶಿವಮೊಗ್ಗ: ಬಿಜೆಪಿಯಲ್ಲಿ ಒಳಜಗಳಗಳು ಹೈಕಮಾಂಡ್​ವರೆಗು ಪ್ರತಿಧ್ವನಿಸಿದ್ದು. ಬಿಜೆಪಿ ಹೈಕಮಾಂಡ್​ ಯತ್ನಾಳ ಮತ್ತು ತಂಡವನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುತ್ತಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಮಾದ್ಯಮಕ್ಕೆ ಅಚ್ಚರಿಯ ಹೇಳಿಕೆ ನೀಡಿದ್ದು. ಕಚ್ಚಾಡುವುದರಿಂದ ಯಾರಿಗೂ ಲಾಭವಿಲ್ಲ, ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಬಿ.ಎಸ್​ ಯಡಿಯೂರಪ್ಪ ‘ ಯತ್ನಾಳ್ ವಿಷಯ ಎಲ್ಲಾ ಸುಸೂತ್ರವಾಗಿ ಬಗೆಹರಿಯುತ್ತದೆ, ಎಲ್ಲರೂ ಒಟ್ಟಾಗಿ ಹೋಗುವುದರಿಂದ ಸಾಧನೆ ಮಾಡಲು ಸಾಧ್ಯ ಇದೆ. ಆದರೆ
ಪರಸ್ಪರ ‌ಕಚ್ಚಾಡುವುದರಿಂದ ಯಾರಿಗೂ ಲಾಭ ಇಲ್ಲ. ಎಲ್ಲರೂ ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ. ಈ ಅಧಿವೇಶನದಲ್ಲಿ ಎಲ್ಲರೂ ಒಟ್ಟಾಗಿ ಈ ಸರ್ಕಾರದ ವೈಫಲ್ಯದ ವಿರುದ್ದ ಹೋರಾಟ ಮಾಡಬೇಕು’ ಎಂದು ಹೇಳಿದರು.

 

RELATED ARTICLES

Related Articles

TRENDING ARTICLES