ವಿಜಯಪುರ : ಕಬ್ಬು ಕಟಾವು ಮಾಡುವ ಯಂತ್ರ ಮತ್ತು ಕಾರಿನ ನಡುವೆ ಭೀಕರ ಅಪಘಾತವಾಗಿದ್ದು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 5ಜನ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿಯಲ್ಲಿ ಘಟನೆ ನಡೆದಿದ್ದು. ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಕ್ಸಿಡೆಂಟ್ ರಭಸಕ್ಕೆ ಕಾರಿನಲ್ಲಿದ್ದ 5 ಜನರು ಮೃತರಾಗಿದ್ದು. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ ಎಂದು ಮಾಹಿತಿ ದೊರೆತಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದಂತೆ 5 ಜನರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳು ಎಂದು ಗುರುತಿಸಿದ್ದು. ಹುಣಸಗಿಯಿಂದ ತಾಳಿಕೋಟೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.