ಹಾಸನ : ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮಾಹಿತಿ ದೊರೆತಿದೆ. ಕಾರು ಕೆರೆಗೆ ಬೀಳುತ್ತಿದ್ದಂತೆ ಎಚ್ಚೆತ್ತ ಸ್ಥಳೀಯ ಮೀನುಗಾರರು ಚಾಲಕನನ್ನು ರಕ್ಷಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.
ಹಾಸನ – ಚಿಕ್ಕಮಗಳೂರು ಮುಖ್ಯ ರಸ್ತೆಯಲ್ಲಿ ಕಾರು ಅಪಘಾತವಾಗಿದ್ದು. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿನ ಕೆರೆಗೆ ಬಿದ್ದಿದೆ. ಈ ವೇಳೆ ಅಲ್ಲಿಯೆ ಬೆಲೆ ಬೀಸಿ ಮೀನು ಹಿಡಿಯುತ್ತಿದ್ದ ಮೀನುಗಾರರು ಕೊಚ್ಚಿ ಹೋಗುತ್ತಿದ್ದ ಕಾರನ್ನು ನೋಡಿದ್ದು. ಕೂಡಲೇ ನೀರಿನಲ್ಲಿ ಈಜಿ ಕಾರು ಚಾಲಕನನ್ನು ರಕ್ಷಿಸಿದ್ದಾರೆ.
ಮೀನುಗಾರರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದು. ಕ್ರೇನ್ ಸಹಾಯದಿಂದ ಕಾರನ್ನು ಮೇಲಕ್ಕೆತ್ತಲಾಗುತ್ತಿದೆ ಎಂದು ಮಾಹಿತಿ ದೊರೆತಿದೆ.